ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಜನಾಪುರಕ್ಕೆ ಮೆಟ್ರೊ: ಇಂದು ಉದ್ಘಾಟನೆ

Last Updated 13 ಜನವರಿ 2021, 19:53 IST
ಅಕ್ಷರ ಗಾತ್ರ

ಬೆಂಗಳೂರು: ಬಹುನಿರೀಕ್ಷಿತ ಯಲಚೇನಹಳ್ಳಿ– ಸಿಲ್ಕ್‌ ಇನ್‌ಸ್ಟಿಟ್ಯೂಷನ್‌ (ಕನಕಪುರ ರಸ್ತೆ) ವಿಸ್ತರಿತ ಮಾರ್ಗದ ಉದ್ಘಾಟನೆ ಇದೇ 14ರಂದು ಸಂಜೆ 4.30ಕ್ಕೆ ನಡೆಯಲಿದ್ದು, 5ರಿಂದ ಮೆಟ್ರೊ ರೈಲು ಸಂಚಾರ ಪ್ರಾರಂಭವಾಗಲಿದೆ.

‘6.29 ಕಿ.ಮೀ. ಉದ್ದದ ಈ ವಿಸ್ತರಿತ ಮಾರ್ಗವನ್ನು ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸುವರು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮುಖ್ಯ ಅತಿಥಿಯಾಗಿರುವರು. ಕೋಣನಕುಂಟೆ ಕ್ರಾಸ್‌ ಮೆಟ್ರೊ ನಿಲ್ದಾಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಹಸಿರು ಮಾರ್ಗದಡಿ ಬರುವ ಈ ವಿಸ್ತರಿತ ಮಾರ್ಗದಲ್ಲಿ ಕೋಣನಕುಂಟೆ ಕ್ರಾಸ್, ದೊಡ್ಡಕಲ್ಲಸಂದ್ರ, ವಜ್ರಹಳ್ಳಿ, ತಲಘಟ್ಟಪುರ ಮತ್ತು ಅಂಜನಾಪುರ ನಿಲ್ದಾಣಗಳು ಇವೆ. ರೈಲ್ವೆ ಸುರಕ್ಷತಾ ಆಯುಕ್ತರು ಎರಡು ತಿಂಗಳ ಹಿಂದೆಯೇ ಈ ಮಾರ್ಗಕ್ಕೆ ಹಸಿರು ನಿಶಾನೆ ನೀಡಿದ್ದರು. ಗಣ್ಯರು ದಿನಾಂಕ ಸಿಗದ ಕಾರಣ ಉದ್ಘಾಟನೆ ವಿಳಂಬವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT