ಸೋಮವಾರ, ಆಗಸ್ಟ್ 26, 2019
22 °C

‘ನಮ್ಮ ಮೆಟ್ರೊ’ ಪಿಲ್ಲರ್‌ನಲ್ಲಿ ಬಿರುಕು ? 

Published:
Updated:

ಬೆಂಗಳೂರು: ‘ನಮ್ಮ ಮೆಟ್ರೊ’ ನೇರಳೆ ಮಾರ್ಗದಲ್ಲಿನ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣದ ಮೆಟ್ರೊ ನಿಲ್ದಾಣಗಳ ಕೆಲವು ಪಿಲ್ಲರ್ ಗಳು ಬಿರುಕು ಬಿಟ್ಟಿವೆ’ ಎಂದು ಬಿಎಂಆರ್‌ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಆರೋಪಿಸಿದ್ದಾರೆ. 

‘ನಿರ್ವಹಣಾ ಕಾಮಗಾರಿ ನೆಪದಲ್ಲಿ ಆ.3 ಮತ್ತು 4 ರಂದು ಬೈಯಪ್ಪನಹಳ್ಳಿ ಮತ್ತು ಎಂ.ಜಿ.ರಸ್ತೆ ನಿಲ್ದಾಣಗಳ ನಡುವೆ ಭಾಗಶಃ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಿರುಕು ಬಿಟ್ಟಿರುವ ಕಂಬಗಳ ಬಗ್ಗೆ ಮಾಹಿತಿ ಮುಚ್ಚಿಡಲಾಗಿದೆ’ ಎಂದು ಅವರು ಆರೋಪಿಸಿದ್ದಾರೆ. 

‘ಇಂದಿರಾನಗರ ನಿಲ್ದಾಣದ ಪಿಲ್ಲರ್ ಸಂಖ್ಯೆ 8 ಹಾಗೂ ಬೈಯಪ್ಪನಹಳ್ಳಿ ನಿಲ್ದಾಣದ ಪಿಲ್ಲರ್ ಸಂಖ್ಯೆ 2 ಮತ್ತು 3ರಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿಂದೆ ಟ್ರಿನಿಟಿ ನಿಲ್ದಾಣದ ಪಿಲ್ಲರ್ ಸಂಖ್ಯೆ 156ರಲ್ಲೂ ಇದೇ ರೀತಿ ಬಿರುಕು ಕಾಣಿಸಿಕೊಂಡಿತ್ತು’ ಎಂದು ಅವರು ಆರೋಪಿಸಿದ್ದಾರೆ. 

‘ಯಾವುದೇ ಪಿಲ್ಲರ್ ನಲ್ಲಿ ಬಿರುಕು ಕಾಣಿಸಿಕೊಂಡಿಲ್ಲ. ಊಹಾಪೋಹಗಳನ್ನು ಆಧರಿಸಿ ಆರೋಪ ಮಾಡಲಾಗುತ್ತಿದೆ. ಗ್ರಾಹಕರ ಸುರಕ್ಷತೆಯ ಬಗ್ಗೆ ನಮಗೂ ಕಾಳಜಿ ಇರುತ್ತದೆ. ಬಿರುಕು ಬಿಟ್ಟಿದ್ದರೆ ನಾವೇ ಮಾಹಿತಿ ನೀಡುತ್ತಿದ್ದೆವು. ಎಂದಿನಂತೆ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದು ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

Post Comments (+)