ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ರೈಲು: ರಾತ್ರಿ ವೇಳೆ ಮಹಿಳಾ ಸಿಬ್ಬಂದಿ ನಿಯೋಜನೆ

‘ನಮ್ಮ ಮೆಟ್ರೊ’ ರೈಲಿನಲ್ಲಿ ಪ್ರಾಯೋಗಿಕವಾಗಿ ಜಾರಿ
Last Updated 7 ಡಿಸೆಂಬರ್ 2019, 6:21 IST
ಅಕ್ಷರ ಗಾತ್ರ

ಬೆಂಗಳೂರು: ಮೆಟ್ರೊ ರೈಲಿನಲ್ಲಿ ತಡರಾತ್ರಿ ಪ್ರಯಾಣಿಸುವ ಮಹಿಳಾ ಪ್ರಯಾಣಿ
ಕರಿಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಸಿಹಿ ಸುದ್ದಿ ನೀಡಿದೆ. ರಾತ್ರಿ 10ರ ನಂತರ ಪ್ರಯಾಣಿಸುವ ಪ್ರತಿ ರೈಲಿನಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುತ್ತಿದೆ. ಡಿ.3ರಿಂದ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಜಾರಿಗೆ ಬಂದಿದೆ.

ಮೆಟ್ರೊ ರೈಲಿನಲ್ಲಿ ನಿತ್ಯ ಸರಾಸರಿ 4 ಲಕ್ಷ ಜನ ಪ್ರಯಾಣಿಸುತ್ತಾರೆ. ಇವರಲ್ಲಿ ಮಹಿಳಾ ಪ್ರಯಾಣಿಕರ ಪ್ರಮಾಣ ಶೇ 31. ಮಹಿಳೆಯರಿಗಾಗಿ ಮೀಸಲಿರುವ ಬೋಗಿಗಳಲ್ಲಿ ರಾತ್ರಿ 9.30ರ ನಂತರ ಪ್ರಯಾಣಿಕರ ಸಂಖ್ಯೆ ತುಂಬಾ ಕಡಿಮೆ ಇರುತ್ತದೆ. ಈ ಕಾರಣದಿಂದ ಮಹಿಳೆಯರಿಗೆ ಅಸುರಕ್ಷತೆ ಭಾವ ಕಾಡುತ್ತಿತ್ತು.

‘ಮಹಿಳೆಯರಿಗಾಗಿ ಮೀಸಲಿಟ್ಟಿರುತ್ತಿದ್ದ ಬೋಗಿಗಳನ್ನು ಪ್ರವೇಶಿಸುತ್ತಿದ್ದ ಕೆಲವು ಪುರುಷರು ರಾತ್ರಿ ವೇಳೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಹಲವು ದೂರುಗಳು ಬಂದಿದ್ದವು. ಹೀಗಾಗಿ, ರಾತ್ರಿ 10ರ ನಂತರ ಪ್ರಯಾಣಿಸುವ ಎಲ್ಲ ರೈಲುಗಳಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ’ ಎಂದು ನಿಗಮದ ಮುಖ್ಯಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚವ್ಹಾಣ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT