ಬುಧವಾರ, ಜೂನ್ 23, 2021
30 °C

ಮೆಟ್ರೊ: 31ರಂದು ರೈಲು ಸಂಚಾರ ಭಾಗಶಃ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಮ್ಮ ಮೆಟ್ರೊ’ದ ನೇರಳೆ ಮಾರ್ಗದಲ್ಲಿನ ಟ್ರಿನಿಟಿ ಮತ್ತು ಹಲಸೂರು ನಿಲ್ದಾಣಗಳ ನಡುವೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಇದೇ 31ರಂದು ರೈಲು ಸಂಚಾರ ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.

ಭಾನುವಾರ ಬೆಳಿಗ್ಗೆ 7ರಿಂದ 9ರವರೆಗೆ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದವರೆಗೆ ರೈಲು ಸಂಚಾರ ಇರುವುದಿಲ್ಲ ಎಂದು ಅದು ತಿಳಿಸಿದೆ. ಎಂ.ಜಿ. ರಸ್ತೆ ನಿಲ್ದಾಣದಿಂದ ಮತ್ತು ಮೈಸೂರು ರಸ್ತೆ ನಿಲ್ದಾಣದವರೆಗೆ ಮಾತ್ರ ರೈಲುಗಳು ಸಂಚರಿಸಲಿವೆ. 9 ಗಂಟೆಯ ನಂತರ ನೇರಳೆ ಮಾರ್ಗದಲ್ಲಿ ಸಂಪೂರ್ಣ ಸೇವೆ ಇರಲಿದೆ.

ಹಸಿರು ಮಾರ್ಗದಲ್ಲಿ ಮೆಟ್ರೊ ರೈಲು ಸೇವೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು