ಬುಧವಾರ, ಸೆಪ್ಟೆಂಬರ್ 22, 2021
21 °C

​ಬೆಂಗಳೂರು: ಆಗಸ್ಟ್ 11–12ರಂದು ಮೆಟ್ರೊ ರೈಲು ಸಂಚಾರ ಭಾಗಶಃ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಮ್ಮ ಮೆಟ್ರೊದ ಕೆಂಗೇರಿ ವಿಸ್ತರಿತ ಮಾರ್ಗವನ್ನು ಅಂತಿಮ ಕಾರ್ಯಾಚರಣೆಗೆ ಸಜ್ಜುಗೊಳಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಆ.11 ಮತ್ತು 12ರಂದು ನೇರಳೆ ಮಾರ್ಗದ ವಿಜಯನಗರ ಮತ್ತು ಮೈಸೂರು ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ರೈಲು ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ಹೇಳಿದೆ.

‘ಈ ಎರಡು ದಿನಗಳಂದು ಬೈಯಪ್ಪನಹಳ್ಳಿಯಿಂದ ವಿಜಯನಗರ ಮೆಟ್ರೊ ನಿಲ್ದಾಣಗಳ ನಡುವೆ ಮಾತ್ರ ಸೇವೆ ಲಭ್ಯ ಇರಲಿದೆ’ ಎಂದು ನಿಗಮವು ಪ್ರಕಟಣೆಯಲ್ಲಿ ಹೇಳಿದೆ.

‘ಕಾರ್ಯಾಚರಣೆ ಪೂರ್ಣಗೊಂಡ ನಂತರ, ಅಂದರೆ, ಆ. 13ರಿಂದ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣದವರೆಗಿನ ನೇರಳೆ ಮಾರ್ಗದಲ್ಲಿ ಎಂದಿನಂತೆ ಸೇವೆ ಲಭ್ಯ ಇರಲಿದೆ’ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಹಸಿರು ಮಾರ್ಗದ ನಾಗಸಂದ್ರದಿಂದ ರೇಷ್ಮೆ ಸಂಸ್ಥೆಯವರೆಗಿನ ಮೆಟ್ರೊ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದೂ ನಿಗಮ ಸ್ಪಷ್ಟಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು