ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

31ರವರೆಗೆ ಮೆಟ್ರೊ ರೈಲು ಸಂಚಾರ ಸಂಪೂರ್ಣ ಸ್ಥಗಿತ

Last Updated 17 ಮೇ 2020, 22:21 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ಲಾಕ್‌ಡೌನ್‌ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ, ಅಲ್ಲಿಯವರೆಗೂ ಮೆಟ್ರೊ ರೈಲು ಸಂಚಾರ ನಿಷೇಧ ಮುಂದುವರಿಯಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.

‘ಕೇಂದ್ರ ಗೃಹಸಚಿವಾಲಯದ ಆದೇಶದಂತೆ ಮೇ 31ರವರೆಗೆ ಮೆಟ್ರೊ ರೈಲು ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ’ ಎಂದು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇಠ್ ‘ಪ್ರಜಾವಾಣಿ’ಗೆ ತಿಳಿಸಿದರು.

ರೈಲುಗಳನ್ನು ಸುಸ್ಥಿತಿಯಲ್ಲಿ ಮತ್ತು ಪವರ್‌ ಮೋಡ್‌ನಲ್ಲಿ ಇರಿಸುವ ಉದ್ದೇಶದಿಂದ ಒಂದು ಪರೀಕ್ಷಾರ್ಥ ರೈಲು ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ ಬೆಳಿಗ್ಗೆ ಮತ್ತು ಸಂಜೆ ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಮೆಟ್ರೊ ನಿಲ್ದಾಣಗಳ ಬಳಿಯ ವಾಹನ ನಿಲುಗಡೆ ಸ್ಥಳಗಳು ಮತ್ತು ನಿಲ್ದಾಣದೊಳಗಿನ ವಾಣಿಜ್ಯ ಮಳಿಗೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ ಎಂದೂ ಅದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT