ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಮೇ 10ರ ಭಾನುವಾರ ಬೆಳಿಗ್ಗೆ 7ರಿಂದ ಎರಡು ಗಂಟೆ ಭಾಗಶಃ ಸಂಚಾರ ಸ್ಥಗಿತಗೊಳಿಸುವುದಿಲ್ಲ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸೆಂಟ್ರಲ್ ಕಾಲೇಜಿನ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೊ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಭಾನುವಾರ ಬೆಳಿಗ್ಗೆ 7ರಿಂದ 9ರವರೆಗೆ ಹೊಸಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ ಎಂದು ಶುಕ್ರವಾರ ತಿಳಿಸಲಾಗಿತ್ತು. ಆದರೆ, ನಗರದಲ್ಲಿ ಭಾನುವಾರ ಅನೇಕ ಕಾರ್ಯಕ್ರಮಗಳು ಇರುವುದರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿಸಲಾಗಿದೆ.

ಪ್ರತಿ ಭಾನುವಾರ ಬೆಳಿಗ್ಗೆ 7ಕ್ಕೆ ಮೆಟ್ರೊ ಸಂಚಾರ ಆರಂಭವಾಗುತ್ತಿತ್ತು. ವಿವಿಧ ಕಾರ್ಯಕ್ರಮಗಳಿಗೆ ಜನರು ಪ್ರಯಾಣಿಸುವ ನಿರೀಕ್ಷೆ ಇರುವುದರಿಂದ ಮೇ 10ರ ಭಾನುವಾರ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.