ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ರೈಲು ಸಂಚಾರ ಆರಂಭಕ್ಕೆ ಸಿದ್ಧತೆ

Last Updated 23 ಮೇ 2020, 19:03 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ ನಂತರದ ಕಾರ್ಯಾಚರಣೆಯ ಕುರಿತು ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ಭದ್ರತಾ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದ್ದು, ಜೂನ್‌ 1ರಿಂದ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ.

‘ಮೆಟ್ರೊ ರೈಲು ಸಂಚಾರ ಆರಂಭವಾದ ನಂತರ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂಬ ಬಗ್ಗೆ ಸಿಬ್ಬಂದಿಗೆ ತಿಳಿಸಿಕೊಡಲಾಗುತ್ತಿದೆ. ಜೂ.1ರಿಂದ ಸಂಚಾರ ಆರಂಭಿಸುವ ಸಾಧ್ಯತೆ ಇದೆ’ ಎಂದು ಭದ್ರತಾ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಬಿ.ಆರ್. ಅಂಬೇಡ್ಕರ್ ಮೆಟ್ರೊ ನಿಲ್ದಾಣದ (ವಿಧಾನಸೌಧ) ಆವರಣದಲ್ಲಿ ಶನಿವಾರ ಸಂಜೆ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಲಾಗುತ್ತಿತ್ತು.

‘60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷ ವಯಸ್ಸಿನೊಳಗಿನವರಿಗೆ ಮೆಟ್ರೊ ರೈಲಿನಲ್ಲಿ ಸಂಚರಿಸಲು ಅವಕಾಶ ನೀಡಲಾಗುವುದಿಲ್ಲ. ಪ್ರಯಾಣಿಕರೆಲ್ಲರಿಗೂ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತದೆ. ನಿಲ್ದಾಣಗಳಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗುತ್ತದೆ. ರೈಲಿನಲ್ಲಿ ಒಮ್ಮೆಗೆ ಗರಿಷ್ಠ 350 ಜನರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ಇರುತ್ತದೆ. ಈ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಲಾಗುತ್ತಿದೆ’ ಎಂದು ಅಧಿಕಾರಿ ತಿಳಿಸಿದರು.

ದಿನಾಂಕ ಖಚಿತವಿಲ್ಲ:‘ಮೆಟ್ರೊ ರೈಲು ಸಂಚಾರಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ನಿರ್ದಿಷ್ಟವಾಗಿ ಜೂ.1ರಿಂದಲೇ ಸಂಚಾರ ಆರಂಭಿಸಲಾಗುತ್ತದೆ ಎಂದು ಹೇಳಲಾಗದು. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ. ಸದ್ಯ ಮೇ 31ರವರೆಗೆ ಮೆಟ್ರೊ ರೈಲು ಸಂಚಾರವನ್ನು ನಿಷೇಧಿಸಲಾಗಿದೆ’ ಎಂದು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇಠ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT