ಶನಿವಾರ, ಡಿಸೆಂಬರ್ 14, 2019
24 °C
ಬೊಮ್ಮಸಂದ್ರದಲ್ಲಿ ವಯಡಕ್ಟ್‌ ಅಳವಡಿಕೆ ಕಾಮಗಾರಿ ಮುಕ್ತಾಯ

ಆರ್.ವಿ. ರಸ್ತೆ-ಯಲಚೇನಹಳ್ಳಿ: ಮೆಟ್ರೊ ರೈಲು ಸಂಚಾರ ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆರ್.ವಿ. ರಸ್ತೆ-ಯಲಚೇನಹಳ್ಳಿ ನಡುವೆ ನಾಲ್ಕು ದಿನಗಳಿಂದ ಸ್ಥಗಿತಗೊಂಡಿದ್ದ ಮೆಟ್ರೊ ರೈಲು ಸೇವೆ  ಸೋಮವಾರದಿಂದ ಪುನರಾರಂಭಗೊಳ್ಳಲಿದೆ. 24 ಕಿ.ಮೀ. ಉದ್ದದ ಹಸಿರು ಮಾರ್ಗದಲ್ಲಿ ಎಂದಿನಂತೆ ‘ನಮ್ಮ ಮೆಟ್ರೊ’ ರೈಲು ಸಂಚರಿಸಲಿದೆ.

ಎರಡನೇ ಹಂತದ ಎತ್ತರಿಸಿದ ಮಾರ್ಗದಲ್ಲಿ ಬರುವ ಬೊಮ್ಮಸಂದ್ರದಲ್ಲಿ ವಯಡಕ್ಟ್‌ ಅಳವಡಿಕೆ ಕಾರ್ಯ ಮುಗಿದಿದೆ. ಹಾಗಾಗಿ, ನ. 18ರ ಬೆಳಿಗ್ಗೆ 5ರಿಂದ ನಾಗಸಂದ್ರ ಹಾಗೂ ಯಲಚೇನಹಳ್ಳಿಯಿಂದ ಮೆಟ್ರೊ ರೈಲುಗಳು ಎಂದಿನಂತೆ ಸಂಚರಿಸಲಿವೆ ಎಂದು  ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚವಾಣ್ ತಿಳಿಸಿದರು. 

ಬೊಮ್ಮಸಂದ್ರದಲ್ಲಿ ವಯಡಕ್ಟ್‌ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ನ. 14ರಿಂದ 17ರವರೆಗೆ ಆರ್.ವಿ. ರಸ್ತೆ ಯಲಚೇನಹಳ್ಳಿ ನಡುವೆ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದಕ್ಕೆ ಪರ್ಯಾಯವಾಗಿ ಬಿಎಂಟಿಸಿ ಬಸ್‌ಗಳ ಉಚಿತ ಸೇವೆ ಕಲ್ಪಿಸಲಾಗಿತ್ತು. ಆದರೂ ನಿಗದಿತ ಸಮಯದಲ್ಲಿ ನಿಗದಿತ ಸ್ಥಳ ತಲುಪಲು ಪ್ರಯಾಣಿಕರು ಪರದಾಡಿದ್ದರು. ಸಂಚಾರದಟ್ಟಣೆ ಕೂಡ ಉಂಟಾಗಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು