ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೀಣ್ಯ ಇಂಡಸ್ಟ್ರಿ–ನಾಗಸಂದ್ರ ನಡುವೆ ಇಂದಿನಿಂದ ಮೆಟ್ರೊ ಸಂಚಾರ ವ್ಯತ್ಯಯ

Published : 19 ಆಗಸ್ಟ್ 2024, 16:16 IST
Last Updated : 19 ಆಗಸ್ಟ್ 2024, 16:16 IST
ಫಾಲೋ ಮಾಡಿ
Comments

ಬೆಂಗಳೂರು: ‘ನಮ್ಮ ಮೆಟ್ರೊ’ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ–ಮಾದಾವರ ಮಧ್ಯೆ ಸಿಗ್ನಲಿಂಗ್ ಸಂಬಂಧಿಸಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಪೀಣ್ಯ ಇಂಡಸ್ಟ್ರಿಯಿಂದ ನಾಗಸಂದ್ರವರೆಗೆ ಮಂಗಳವಾರದಿಂದ (ಆ.20) ಬೇರೆ ಬೇರೆ ಐದು ದಿನಗಳಲ್ಲಿ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.

ಆ.20, 23, 30, ಸೆಪ್ಟೆಂಬರ್‌ 6 ಮತ್ತು 11ರಂದು ಪೀಣ್ಯ ಇಂಡಸ್ಟ್ರಿ– ನಾಗಸಂದ್ರ ಮಧ್ಯೆ ಮೆಟ್ರೊ ರೈಲು ಸಂಚಾರ ಇರುವುದಿಲ್ಲ. ಆ.24ರಂದು ಪೀಣ್ಯ ಇಂಡಸ್ಟ್ರಿ–ನಾಗಸಂದ್ರ ನಡುವೆ ರಾತ್ರಿ 11.05ರ ಬದಲು ರಾತ್ರಿ 10ಕ್ಕೆ ಕೊನೆಯ ರೈಲು ಸಂಚರಿಸಲಿದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಕಡೆಗೆ ಯಾವುದೇ ಬದಲಾವಣೆಗಳು ಇರುವುದಿಲ್ಲ. ನೇರಳೆ ಮಾರ್ಗದಲ್ಲಿಯೂ ವ್ಯತ್ಯಾಸಗಳಿಲ್ಲ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT