ಭಾನುವಾರ, ಜೂನ್ 13, 2021
23 °C

ಮೆಟ್ರೊ ಕಾಮಗಾರಿ ಸ್ಥಗಿತ ಬೇಡ: ರಾಕೇಶ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಮ್ಮ ಮೆಟ್ರೊ’ದ ಎರಡನೇ ಹಂತದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ವ್ಯವಸ್ಥಾಪಕ ನಿರ್ದೇಶಕ ರಾಕೇಶ್‌ ಸಿಂಗ್‌ ಭಾನುವಾರ ಪರಿಶೀಲಿಸಿದರು. 

ಸುಮಾರು 18.82 ಕಿ.ಮೀ. ದೂರದ ಆರ್.ವಿ. ರಸ್ತೆ- ಬೊಮ್ಮಸಂದ್ರ ನಡುವಿನ ಮೆಟ್ರೊ ಕಾಮಗಾರಿಗಳು, ಜಯದೇವ ಆಸ್ಪತ್ರೆ ಬಳಿಯ ಉತ್ತರ-ದಕ್ಷಿಣ ಪ್ರಯಾಣಿಕರ ವಿನಿಮಯ ಜಂಕ್ಷನ್ ಮತ್ತು ಕಾಸ್ಟಿಂಗ್ ಯಾರ್ಡ್‍ಗಳ ಪರಿಶೀಲನೆಯನ್ನು  ಅವರು ನಡೆಸಿದರು.

‘ಲಾಕ್‍ಡೌನ್ ನಡುವೆಯೂ ‘ನಮ್ಮ ಮೆಟ್ರೋ’ ಎರಡನೇ ಹಂತದ ಕಾಮಗಾರಿಗಳನ್ನು ಎಲ್ಲ ಮುನ್ನೆಚ್ಚರಿಕೆ ತೆಗೆದುಕೊಂಡು ನಡೆಸಲಾಗುತ್ತಿದೆ. ಈ ಕಾಮಗಾರಿ ಯಾವುದೇ ಅಡ್ಡಿಯಿಲ್ಲದೆ ಮುಂದುವರಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ನಿಗಮದ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು