ಬೆಂಗಳೂರು: ಮೈಕೊ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಸ್ನೇಹಾ ಅವರ ತಲೆಗೆ ರಾಡ್‌ನಿಂದ ಹೊಡೆದು ಕೊಲೆಗೆ ಯತ್ನಿಸಲಾಗಿದ್ದು, ಕೃತ್ಯ ಎಸಗಿರುವ ಆರೋಪಿ ರವಿಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
‘ಸ್ಥಳೀಯ ನಿವಾಸಿ ಸ್ನೇಹಾ, ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಎಂಜಿನಿಯರ್. ಆರೋಪಿ ರವಿಕುಮಾರ್ ಸಹ ಸಾಫ್ಟ್‌ವೇರ್ ಎಂಜಿನಿಯರ್. ಗಾಯಗೊಂಡಿರುವ ಸ್ನೇಹಾ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
‘ಸ್ನೇಹಾ ಹಾಗೂ ರವಿಕುಮಾರ್, ಇಂದಿರಾನಗರದಲ್ಲಿರುವ ಕಂಪನಿಯೊಂದರಲ್ಲಿ ಕೆಲ ತಿಂಗಳು ಒಟ್ಟಿಗೆ ಕೆಲಸ ಮಾಡಿದ್ದರು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರೆಂದು ಗೊತ್ತಾಗಿದೆ.’
‘ಬೇರೆ ಕಂಪನಿಗೆ ಕೆಲಸಕ್ಕೆ ಸೇರಿದ್ದ ಸ್ನೇಹಾ, ರವಿಕುಮಾರ್ ಜೊತೆ ಮಾತನಾಡುತ್ತಿರಲಿಲ್ಲ. ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಸಿಟ್ಟಾದ ಆರೋಪಿ, ಆಗಸ್ಟ್ 2ರಂದು ಸ್ನೇಹಾ ಅವರ ತಲೆಗೆ ರಾಡ್‌ನಿಂದ ಹೊಡೆದು ಪರಾರಿಯಾಗಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.