ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಯೂಟ ನೌಕರರ ಸಂಭಾವನೆ ಹೆಚ್ಚಿಸಿ: ಕೇಂದ್ರಕ್ಕೆ ಸಚಿವ ಸುರೇಶ್ ಕುಮಾರ್ ಮನವಿ

Last Updated 28 ಏಪ್ರಿಲ್ 2020, 21:59 IST
ಅಕ್ಷರ ಗಾತ್ರ

ಬೆಂಗಳೂರು:ಮಂಗಳವಾರ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರು ನಡೆಸಿದ ವಿಡಿಯೊ ಸಂವಾದದಲ್ಲಿ ಪಾಲ್ಗೊಂಡ ಅವರು, ‘ಬಿಸಿಯೂಟ ಯೋಜನೆ ಆರಂಭವಾದಾಗ ಕೇಂದ್ರ ಸರ್ಕಾರ ನೀಡುತ್ತಿದ್ದ ಪಾಲಿನ ಮೊತ್ತವೇ (₹ 600) ಈಗಲೂ ಮುಂದುವರಿದಿದೆ. ರಾಜ್ಯ ಸರ್ಕಾರ ಮಾತ್ರವೇ ತನ್ನ ಪಾಲನ್ನು ಸಾಕಷ್ಟು ಬಾರಿ ಹೆಚ್ಚಿಸಿದೆ’ ಎಂದರು.

‘ಕೋವಿಡ್ ಸೃಷ್ಟಿಸಿರುವ ಹೊಸ ಜೀವನ ಶೈಲಿಯನ್ನು ಸಮರ್ಥವಾಗಿ ಎದುರಿಸಲು ಶೈಕ್ಷಣಿಕ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಆಧರಿತವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇದಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ಸಹಕಾರ ಒದಗಿಸಬೇಕು’ ಎಂದು ಸಚಿವರು ಕೇಳಿಕೊಂಡರು.

ಪಠ್ಯಕ್ರಮ ಪರಿಷ್ಕರಣೆ: ‘ಲಾಕ್‌ಡೌನ್‌ ಮುಂದುವರಿಕೆಯಿಂದ ಮುಂದಿನ ಶೈಕ್ಷಣಿಕ ಸಾಲಿನ ಪಠ್ಯಕ್ರಮವನ್ನು ಪರಿಷ್ಕರಿಸಲು ಶಿಕ್ಷಣ ಇಲಾಖೆ ನಿರ್ಣಯಿಸಿದ್ದು, ಶಿಕ್ಷಕರ ಸಮಿತಿಗಳ ಮೂಲಕ ಇಂತಹ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಿಗೂ ಮುಂಬರುವ ಸಾಲಿನ ಪಠ್ಯಕ್ರಮವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಿ ದೇಶದಾದ್ಯಂತ ಸಮಾನ ಶೈಕ್ಷಣಿಕ ವ್ಯವಸ್ಥೆಯನ್ನು ಜಾರಿಯಲ್ಲಿಡಬೇಕಾದ ಅಗತ್ಯವಿದೆ’ ಎಂದು ಸಚಿವರು ಹೇಳಿದರು.

ಲಾಕ್‌ಡೌನ್‌ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷೆ
ಪಂಜಾಬ್ ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಎಸ್ಟೆಸ್ಸೆಲ್ಸಿ ಪರೀಕ್ಷೆಯ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ‘ರಾಜ್ಯದಲ್ಲೂ ಲಾಕ್‌ಡೌನ್ ನಂತರ ಪರೀಕ್ಷೆ ನಡೆಸಲು ಸಿದ್ಧತೆ ನಡೆದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತ’ ಎಂದು ಸಚಿವ ಸುರೇಶ್‌ ಕುಮಾರ್‌ ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT