ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊರಿಗೆ ಮರಳಲು ಗಂಟುಮೂಟೆ ಕಟ್ಡಿಕೊಂಡು ಬಸ್ ನಿಲ್ದಾಣಕ್ಕೆ ಬಂದ ವಲಸೆ ಕಾರ್ಮಿಕರು

ಬೆಳಿಗ್ಗೆ 8 ಗಂಟೆಯಿಂದಲೇ ಉಚಿತ ಬಸ್ ಕಾರ್ಯಾಚರಣೆ ಆರಂಭ
Last Updated 6 ಮೇ 2020, 9:24 IST
ಅಕ್ಷರ ಗಾತ್ರ

ಬೆಂಗಳೂರು: ಊರಿಗೆ ಮರಳುವ ಕಾರ್ಮಿಕರಿಗೆ ಉಚಿತ ಸಾರಿಗೆ ಸೌಲಭ್ಯವನ್ನು ಸರ್ಕಾರ ಮತ್ತೆ ಎರಡು ದಿನ ವಿಸ್ತರಿಸಿದ್ದರಿಂದ, ಬುಧವಾರ ಬೆಳಗ್ಗಿನಿಂದಲೇ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಕಾರ್ಮಿಕರು ಬರುತ್ತಿದ್ದಾರೆ.

ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರಿಂದ ಬೆಳಿಗ್ಗೆ 8 ಗಂಟೆಗೆ ಬಸ್ಸುಗಳ ಕಾರ್ಯಾಚರಣೆ ಆರಂಭಗೊಂಡಿದ್ದು ಬೆಂಗಳೂರಿನಿಂದ 106 ಬಸ್ಸುಗಳು ಈಗಾಗಲೇ ಕಾರ್ಯಾಚರಣೆ‌ ನಡೆಸುತ್ತಿದೆ ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ. ಸದಕ್ಕೂ ಮೊದಲು ಬೆಳಿಗ್ಗೆ 9 ಗಂಟೆಯಿಂದ ಬಸ್ಸುಗಳ ಕಾರ್ಯಾಚರಣೆ ಆರಂಭಗೊಳ್ಳಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಿಸಿತ್ತು.

ಬೆಂಗಳೂರು ಹಾಗೂ ರಾಜ್ಯದ ವಿವಿಧ ವಿಭಾಗಗಳಿಂದ ಅಂದಾಜು 1 ಲಕ್ಷ ಕಾರ್ಮಿಕರು ಬಸ್‌ಗಳ ಮೂಲಕ ಬೇರೆ ಬೇರೆ ಕಡೆಗೆ ತೆರಳಿದ್ದಾರೆ. 3,400 ಕ್ಕೂ ಹೆಚ್ಚು ಬಸ್ಸುಗಳು ಕಾರ್ಯಾಚರಣೆ ನಡೆಸಿವೆ.

ಕಾರ್ಮಿಕರಿಗಾಗಿ ರಾಜ್ಯದ ವಿವಿಧ ಒಟ್ಟು72 ಸ್ಥಳಗಳಿಗೆ ಬಸ್ಸುಗಳ ಕಾರ್ಯಚರಣೆ ಮಾಡಲಾಗುತ್ತಿದೆ.

ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಲು ಕೆಎಸ್‌ಆರ್‌ಟಿಸಿ ಮತ್ತು ಸಾರಿಗೆ ನಿಗಮಗಳ ಚಾಲಕ, ನಿರ್ವಾಹಕರು ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT