ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಸ್ಯಜನ್ಯ ಕೈಚೀಲ ಬಳಕೆ: ನಿಯಮ ತಿದ್ದುಪಡಿಗೆ ಸೂಚನೆ

Published 28 ಜೂನ್ 2024, 20:36 IST
Last Updated 28 ಜೂನ್ 2024, 20:36 IST
ಅಕ್ಷರ ಗಾತ್ರ

ಬೆಂಗಳೂರು: ಜೈವಿಕವಾಗಿ ವಿಘಟನೆಯಾಗಿ, 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್‌ ಆ್ಯಸಿಡ್‌ ಪಾಲಿಮರ್‌ ಕೈಚೀಲಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲು ಕಾನೂನು ತಿದ್ದುಪಡಿಗೆ ತುರ್ತಾಗಿ ಪ್ರಸ್ತಾವ ಸಲ್ಲಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಶುಕ್ರವಾರ ಸಭೆ ನಡೆಸಿದ ಅವರು, ‘ಏಕ ಬಳಕೆ ಪ್ಲಾಸ್ಟಿಕ್‌ನಿಂದ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಪರಿಸರಕ್ಕೆ ತೊಂದರೆಯಾಗದಂತಹ ಸಸ್ಯಜನ್ಯ ಕೈಚೀಲಗಳ ಬಳಕೆಗೆ ಒತ್ತು ನೀಡಬೇಕಿದೆ.  ಇದಕ್ಕಾಗಿ 2016ರಲ್ಲಿ ಪ್ಲಾಸ್ಟಿಕ್‌ ನಿಷೇಧಿಸಿ ಹೊರಡಿಸಿ ಆದೇಶ ಹಿಂಪಡೆದು ಕೇಂದ್ರ ಪರಿಸರ ಇಲಾಖೆಯ 2021ರ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಜಾರಿಗೊಳಿಸಲು ಪ್ರಸ್ತಾವ ಸಲ್ಲಿಸಿ’ ಎಂದು ನಿರ್ದೇಶನ ನೀಡಿದರು.

ಮಂಡಳಿ ಸದಸ್ಯ ಶರಣಕುಮಾರ ಮೋದಿ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ. ರವಿ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT