ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ; ತನಿಖೆ ನಡೆಯಬೇಕು ಎಂದ ಗೃಹ ಸಚಿವ

Published 22 ಡಿಸೆಂಬರ್ 2023, 8:27 IST
Last Updated 22 ಡಿಸೆಂಬರ್ 2023, 8:27 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಆಂದ್ರ ಹಳ್ಳಿಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ವಿಚಾರದಲ್ಲಿ ತನಿಖೆ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.

ಈ ವಿಷಯವನ್ನು ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಇಂತಹ ಘಟನೆಗಳು ನಡೆಯಬಾರದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಬೇಕು. ಶಾಲೆಗಳಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು. ಮಕ್ಕಳನ್ನು ಇಂತಹ ಕೆಲಸಗಳಿಗೆ ಬಳಸಿಕೊಳ್ಳಬಾರದು ಎಂದು ಹೇಳಿದರು.

ಯಾವ ಶಿಕ್ಷಕ ಈ ಕೆಲಸ ಮಾಡಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪರಮೇಶ್ವರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT