ಯಲಹಂಕ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಯಲಹಂಕ ಕ್ಷೇತ್ರವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಜಾತಿ ಸಮೀಕ್ಷೆಯ ಪರೀಶೀಲನೆ ನಡೆಸಿದರು.

ಯಲಹಂಕ ಹಳೇನಗರದ ಎ.ಕೆ ಕಾಲೊನಿ, ಅರಕೆರೆ ಬಡಾವಣೆ, ಸುರಧೇನುಪುರ, ಎಂ.ಎಸ್. ಪಾಳ್ಯ ಹಾಗೂ ಬೆಟ್ಟಹಳ್ಳಿ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ, ಸಮೀಕ್ಷೆ ನಡೆಯುತ್ತಿರುವ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಸಮಗ್ರ ಜಾತಿ ಸಮೀಕ್ಷೆ ಕುರಿತು ಜಾಗೃತಿ ಮೂಡಿಸಿದರು. ಸಮೀಕ್ಷೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

‘ಜಾತಿಗಳಿಗೆ ಅನುಗುಣವಾಗಿ ಆರ್ಥಿಕ ಮತ್ತು ಸಾಮಾಜಿಕ ಸವಲತ್ತುಗಳನ್ನು ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ನಡೆಸುತ್ತಿದೆ. ಸಮೀಕ್ಷೆ ಸಂದರ್ಭದಲ್ಲಿ ತಮ್ಮ ಮೂಲ ಜಾತಿಗಳನ್ನು ಸ್ವಷ್ಟವಾಗಿ ತಿಳಿಸಬೇಕು. ಹೊಲೆಯ, ಮಾದಿಗ, ಭೋವಿ, ಕೊರಮ, ಲಂಬಾಣಿ ಸೇರಿದಂತೆ ಎಲ್ಲರೂ ಸರಿಯಾದ ಮಾಹಿತಿ ನೀಡಬೇಕು. ಅಧಿಕಾರಿಗಳೂ ಕೂಲಂಕಶವಾಗಿ ವಿಚಾರಿಸಿ, ಅಗತ್ಯ ಮಾಹಿತಿ ಪಡೆಯಬೇಕು’ ಎಂದು ಸಚಿವರು ಸೂಚಿಸಿದರು.

ಬೆಂಗಳೂರು ಉತ್ತರ ಜಿಲ್ಲಾ ಎಸ್.ಸಿ. ವಿಭಾಗದ ಅಧ್ಯಕ್ಷ ಕೋಗಿಲು ವೆಂಕಟೇಶ್, ಯಲಹಂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ, ಮಾಜಿ ಅಧ್ಯಕ್ಷ ವೈ.ಆರ್. ಶ್ರೀಧರ್, ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅದ್ದೆ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿದಾಸಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಮಾರಸಂದ್ರ ಪ್ರಕಾಶ್, ಮುಖಂಡರಾದ ಲಿಂಗನಹಳ್ಳಿ ವೆಂಕಟೇಶ್, ರಾಜಕುಮಾರ್, ಕಾಂತರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.