ಮಂಗಳವಾರ, ಸೆಪ್ಟೆಂಬರ್ 29, 2020
21 °C
‘ಹಲವು ಪ್ರದೇಶಗಳಿಗೆ ಗಲಭೆ ಹಬ್ಬಿಸುವ ಸಂಚು’

ದುಷ್ಕರ್ಮಿಗಳ ಹೆಡೆಮುರಿ ಕಟ್ಟುತ್ತೇವೆ: ಆರ್‌. ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಗಲ್ಲಿ ಗಲ್ಲಿಗೆ ನುಗ್ಗಿ, ಮನೆ ಮನೆಗೆ ನುಗ್ಗಿ ಹಿಂಸಾಚಾರ ಮಾಡಿದ ದುಷ್ಕರ್ಮಿಗಳನ್ನು ಹಿಡಿದು ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳುತ್ತೇವೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಜತೆ ಮಾತುಕತೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಾಂಧಲೆ ನಡೆಸುವವರನ್ನು ಸರ್ವನಾಶ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಪೆಟ್ರೋಲ್‌ ಬಾಂಬ್‌ ಹಾಕಿ ಮನೆಯನ್ನು ಸುಟ್ಟು ಹಾಕಿದ್ದಾರೆ. ಶ್ರೀನಿವಾಸಮೂರ್ತಿ ಅವರನ್ನು ಮುಗಿಸಲು ಸಂಚು ಮಾಡಿದಂತೆ ಕಾಣುತ್ತದೆ.  ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ನಂತರ ಶಿವಾಜಿನಗರ ಮತ್ತು ಇತರ ಕಡೆಗಳಲ್ಲಿ ಗಲಭೆ ಸೃಷ್ಟಿಸುವ ಉದ್ದೇಶ ಗಲಭೆಕೋರರಿಗೆ ಇತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಗಲಭೆ ಬೇರೆ ಕಡೆಗಳಿಗೆ ಹಬ್ಬಿಸುವುದನ್ನು ತಪ್ಪಿಸಿದರು’ ಎಂದು ಅಶೋಕ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು