‘₹287 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸೆಪ್ಟೆಂಬರ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಗಡುವು ನೀಡಲಾಗಿದೆ’ ಎಂದರು.
ತಿಂಗಳಲ್ಲಿ ಚರಕ ಆಸ್ಪತ್ರೆ ಉದ್ಘಾಟನೆ: ‘ಚರಕ ಆಸ್ಪತ್ರೆಯನ್ನು ಶೀಘ್ರ ಉದ್ಘಾಟಿಸಲಾಗುವುದು. ಬಿಬಿಎಂಪಿ ಈ ಕಟ್ಟಡ ನಿರ್ಮಿಸಿದೆ. ಇನ್ಫೋಸಿಸ್ ಮೂಲಸೌಲಭ್ಯ ಒದಗಿಸಿದೆ. ಹೃದಯ ಸಂಬಂಧಿ, ನರರೋಗ, ನೆಫ್ರಾಲಜಿ ಸೇರಿದಂತೆ ಎಲ್ಲ ಚಿಕಿತ್ಸೆ ನೀಡಲಾಗುವುದು. ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಸಿಗಲಿದೆ’ ಎಂದು ಸಚಿವರು ಮಾಹಿತಿ ನೀಡಿದರು.