ಮಂಗಳವಾರ, ಮಾರ್ಚ್ 28, 2023
31 °C

ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದ ಸಚಿವ‌ ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು

ಬೆಂಗಳೂರು: ಸುಮಾರು 5 ತಿಂಗಳ ಬಳಿಕ ಸಂಚಾರ ಆರಂಭಿಸಿರುವ ಮೆಟ್ರೊ ರೈಲಿನಲ್ಲಿ ಸೋಮವಾರ ಆರೋಗ್ಯ ಸಚಿವ‌ ಬಿ. ಶ್ರೀರಾಮುಲು ಪ್ರಯಾಣಿಸಿದರು. 

ವಿಧಾನಸೌಧ ನಿಲ್ದಾಣದಿಂದ ಕೆಂಪೇಗೌಡ ನಿಲ್ದಾಣದವರೆಗೆ (ಮೆಜೆಸ್ಟಿಕ್) ಸಂಚರಿಸಿದರು. ಈ ವೇಳೆ, ಪ್ರಯಾಣಿಕರ ಸುರಕ್ಷತೆಗೆ ಬಿಎಂಆರ್‌ಸಿಎಲ್ ಕೈಗೊಂಡಿರುವ ಕ್ರಮಗಳನ್ನು‌ ಪರಿಶೀಲಿಸಿದರು. 

'ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಮೆಟ್ರೊ ರೈಲಿನಲ್ಲಿ ಪ್ರಯಾಣಿಸಲು ಭಯ ಬೇಡ, ಆದರೆ ಎಚ್ಚರಿಕೆ ಅಗತ್ಯ. ಎಲ್ಲ ಪ್ರಯಾಣಿಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು'  ಎಂದು ಶ್ರೀರಾಮುಲು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು