ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಅನಾಹುತ ತಡೆಗೆ ಕ್ರಮ ವಹಿಸಿ: ಸಚಿವರ ಸೂಚನೆ

Last Updated 2 ಜೂನ್ 2022, 20:21 IST
ಅಕ್ಷರ ಗಾತ್ರ

ಬೆಂಗಳೂರು: ‘ಮಳೆ ಹಾನಿ ತಡೆಗೆ ಶಾಶ್ವತ ಪರಿಹಾರ ರೂಪಿಸಿ ಅನಾಹುತಗಳಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ರಾಜರಾಜೇಶ್ವರಿನಗರ ವಲಯ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜರಾಜೇಶ್ವರಿ ನಗರ ವಲಯ ಕಚೇರಿಯಲ್ಲಿ ಮುಂಗಾರು ಮಳೆ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಮಳೆ ಬಂದಾಗ ಅಧಿಕಾರಿಗಳು ಪೋನ್ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಈ ಆರೋಪಗಳು ಮರುಕಳಿಸಬಾರದು. ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ರಾಜಕಾಲುವೆಗಳನ್ನು ಸ್ವಚ್ಛಗೊಳಿಸ
ಬೇಕು. ತಡೆಗೋಡೆಗಳನ್ನು ಎತ್ತರಿಸಬೇಕು’ ಎಂದು ಹೇಳಿದರು.

‘ಮೇ ತಿಂಗಳಲ್ಲಿ ಸುರಿದ ಮಳೆಯಿಂದ ಆರ್.ಆರ್. ನಗರ ವಲಯ ವ್ಯಾಪ್ತಿಯಲ್ಲಿ ಎಷ್ಟು ಮನೆಗಳಿಗೆ ಹಾನಿಯಾಗಿದೆ, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಎಷ್ಟು ಮಂದಿಗೆ ನೀಡಲಾಗಿದೆ’ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 406, ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 122 ಮನೆಗಳಿಗೆ ಹಾನಿಯಾಗಿದೆ. ಸಂತ್ರಸ್ತರ ಬ್ಯಾಂಕ್ ಖಾತೆಗೆ ₹1.32 ಕೋಟಿ ಜಮೆ ಮಾಡಲಾಗಿದೆ ಎಂದು ಉತ್ತರಿಸಿದರು.

‘ರಸ್ತೆ ಗುಂಡಿಗಳ ವಿಚಾರವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ರಾಜರಾಜೇಶ್ವರಿನಗರ ವಲಯದಲ್ಲಿ ಎಷ್ಟು ಗುಂಡಿಗಳನ್ನು ಮುಚ್ಚಲಾಗಿದೆ’ ಎಂದು ಪ್ರಶ್ನಿಸಿದರು. ಇನ್ನೆರಡು ದಿನದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುವುದು. ರಸ್ತೆಯಲ್ಲಿ ಗುಂಡಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

‘1,228 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದೆ. ಇದರಲ್ಲಿ 605 ಗುಂಡಿಗಳನ್ನು ಮುಚ್ಚಲಾಗಿದ್ದು, 625 ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಪ್ರಗತಿಯಲ್ಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಗುತ್ತಿಗೆ ಪಡೆದವರು ಉಪಗುತ್ತಿಗೆ ನೀಡುತ್ತಿದ್ದಾರೆ. ಆದ್ದರಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂಬ ದೂರುಗಳಿವೆ. ಗುತ್ತಿಗೆದಾರರ ಸಮಸ್ಯೆ ಇದ್ದರೆ ಕೂಡಲೇ ವರದಿ ನೀಡಿ. ಅವರಿಗೆ ನೋಟಿಸ್ ನೀಡಿ’ ಎಂದು ವಲಯ ಆಯುಕ್ತ ರಾಮ್ ಪ್ರಸಾದ್ ಮನೋಹರ್ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT