ಶನಿವಾರ, ಸೆಪ್ಟೆಂಬರ್ 25, 2021
22 °C

ರೈತರ ಜತೆ ಬಾಂಧವ್ಯವಿರಲಿ: ಸಚಿವ ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ರೈತರ ಜತೆ ಬಾಂಧವ್ಯದಿಂದ ವರ್ತಿಸುವುದರ ಜತೆಗೆ ಸಮಯ ಪರಿಪಾಲನೆ, ಶಿಸ್ತು, ಪಾರ್ದರ್ಶಕತೆ ಅಳವಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ವಿಕಾಸಸೌಧದಲ್ಲಿ ಪರೀಕ್ಷಾರ್ಥ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಡಳಿತಾತ್ಮಕ ವಿಷಯಗಳ ಕುರಿತು ಏರ್ಪಡಿಸಿದ್ದ ಕಾರ್ಯಾಗಾರ ಸಭೆಯಲ್ಲಿ ಮಾತನಾಡಿದರು.

ನೂತನವಾಗಿ ಸೇರ್ಪಡೆಯಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಗಳು ಇನ್ನೂ 30 ವರ್ಷಗಳ ಕಾಲ ಇಲ್ಲಿಯೇ ಕಾರ್ಯ ನಿರ್ವಹಣೆ ಮಾಡ ಬೇಕಿದೆ. ಹೀಗಾಗಿ ಸಹಕಾರ ಕ್ಷೇತ್ರ ಮತ್ತು ಇಲಾಖೆಗಳಲ್ಲಿ ಆರಂಭದ 2 ವರ್ಷಗಳಲ್ಲಿ ಕಲಿಯುವ ಕೆಲಸದ ಮೇಲೆ ಮುಂದಿನ ಯಶಸ್ಸು ನಿಂತಿರುತ್ತದೆ ಎಂದು ಸೋಮಶೇಖರ್‌ ಅವರು ತಿಳಿಸಿದರು.

‘ಇಲ್ಲಿ ನೀವು ದಕ್ಷತೆಯಿಂದ ಕಾರ್ಯನಿರ್ವಹಣೆ ಮಾಡಬೇಕು. ಸಹಕಾರ ಕೆಲಸದ ಜೊತೆ ಜೊತೆಯಲ್ಲಿಯೇ ನೀವು ನಿಮ್ಮ ಕುಟುಂಬದವರಿಗೂ ಸಮಯವನ್ನು ಮೀಸಲಿಡಬೇಕು. ಮತ್ತು ಅವರ, ನಿಮ್ಮ ಆರೋಗ್ಯದ ಕಡೆಯೂ ಗಮನಹರಿಸಿಕೊಳ್ಳಬೇಕು’ ಎಂದೂ ಅವರು ಸಲಹೆ ನೀಡಿದರು.

ನಮಗೆ ಇಬ್ಬರೇ ಕ್ಯಾಪ್ಟನ್
‘ನಮಗೆ ಪ್ರತ್ಯೇಕವಾಗಿ ಯಾವುದೇ ಕ್ಯಾಪ್ಟನ್‌ಗಳಾಗಲಿ, ನಾಯಕರಾಗಲೀ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರದ ಕ್ಯಾಪ್ಟನ್ ಆದರೆ, ಶಾಸಕರಾಗಿ, ಪಕ್ಷದ ಸದಸ್ಯನಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಕ್ಯಾಪ್ಟನ್’ ಎಂದು ಸೋಮಶೇಖರ್‌ ಹೇಳಿದರು.

‘ಈ ಇಬ್ಬರನ್ನು ಬಿಟ್ಟರೆ ನಮಗೆ ಬೇರೆ ಯಾವ ಕ್ಯಾಪ್ಟನ್‌ಗಳೂ ರಾಜ್ಯದಲ್ಲಿ ಇಲ್ಲ’ ಎಂದು ಸೋಮಶೇಖರ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು