ಭಾನುವಾರ, ಜುಲೈ 25, 2021
27 °C

ಕೆಸಿ.ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ನಗರದ ಕೆ.ಸಿ.ಜನರಲ್ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು. ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗಿರುವ ಬಗ್ಗೆ ಮಾಹಿತಿ ಕೇಳಿದ ಅವರು, ವೈದ್ಯಕೀಯ ಅಧೀಕ್ಷಕರನ್ನು ತರಾಟೆಗೆ ತೆಗೆದುಕೊಂಡರು. 

ವೈದ್ಯರು, ಶುಶ್ರೂಷಕರು ಸೇರಿದಂತೆ 35 ಮಂದಿ ಸೋಂಕಿತರಾಗಿರುವುದಕ್ಕೆ ಅಧೀಕ್ಷಕರನ್ನು ಪ್ರಶ್ನಿಸಿ, ‘ಸಿಬ್ಬಂದಿಗೆ ರಕ್ಷಣೆ ನೀಡಲು ವಿಫಲರಾಗಿರುವ ನೀವು ರೋಗಿಗಳನ್ನು ಹೇಗೆ ನೋಡಿಕೊಳ್ಳುತ್ತೀರಿ’ ಎಂದು ತರಾಟೆಗೆ ತೆಗೆದುಕೊಂಡರು. ಅಲ್ಲಿನ ರೋಗಿಗಳ ಜತೆಗೆ ವಿಡಿಯೊ ಕಾಲ್ ಮೂಲಕ ಸಂವಾದ ನಡೆಸಿ, ಆಹಾರ ಮತ್ತು ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು. 

ಅಲ್ಲಿನ ವೈದ್ಯರು, ಶುಶ್ರೂಷಕರು ಹಾಗೂ ಆರೋಗ್ಯ ಸಿಬ್ಬಂದಿಯ ಹಾಜರಾತಿಯನ್ನು ಪರಿಶೀಲಿಸಿದ ಅವರು, ಚಿಕಿತ್ಸೆ, ಶುಚಿತ್ವ ಹಾಗೂ ಮಾರ್ಗಸೂಚಿ ಪಾಲನೆ ಕುರಿತು ಮಾಹಿತಿ ಪಡೆದುಕೊಂಡರು. ಕೋವಿಡ್ ಕಾರ್ಯದಲ್ಲಿ ನಿರತರಾಗಿರುವವರಿಗೆ ನೀಡಲಾಗಿರುವ ವೈಯಕ್ತಿಕ ಸುರಕ್ಷತಾ ಸಾಧನಗಳ (ಪಿಪಿಇ ಕಿಟ್) ಗುಣಮಟ್ಟದ ಬಗ್ಗೆ ವಿಚಾರಿಸಿದರು. 60 ವರ್ಷದ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಕೂಡ ಮಾಹಿತಿ ಪಡೆದುಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು