ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಭರವಸೆ: ಧರಣಿ ಹಿಂಪಡೆದ ಅಂಗವಿಕಲರು

Published 29 ಫೆಬ್ರುವರಿ 2024, 22:13 IST
Last Updated 29 ಫೆಬ್ರುವರಿ 2024, 22:13 IST
ಅಕ್ಷರ ಗಾತ್ರ

ಬೆಂಗಳೂರು: ಅಂಗವಿಕಲರ ಬೇಡಿಕೆಗೆ ಸ್ಪಂದಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಥಳದಲ್ಲಿಯೇ ಆದೇಶ ಹೊರಡಿಸಿದ್ದರಿಂದ ಅಂಗವಿಕಲರು ನಡೆಸುತ್ತಿದ್ದ ಧರಣಿ ಸತ್ಯಾಗ್ರಹವನ್ನು ಹಿಂಪಡೆದುಕೊಂಡರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗವಿಕಲರ ಸಂಘದ ನೇತೃತ್ವದಲ್ಲಿ ಗುರುವಾರದಿಂದ ಧರಣಿ ಆರಂಭವಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್‌ ಬೇಡಿಕೆಗಳನ್ನು ಆಲಿಸಿದರು. 

ಮಹಿಳಾ ಪುನರ್ವಸತಿ ಕಾರ್ಯಕರ್ತೆಯರಿಗೆ ವೇತನ ಸಹಿತ 6 ತಿಂಗಳು ಹೆರಿಗೆ ರಜೆ ನೀಡಬೇಕು. ಗರ್ಭಪಾತ ರಜೆ 45 ದಿನ ನೀಡಬೇಕು.  ಬೇಡಿಕೆಗೆ ಮತ್ತು ಹೊಸದಾಗಿ ರಚನೆಗೊಂಡಿರುವ 51 ತಾಲೂಕುಗಳಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್ ಡಬ್ಲ್ಯು) ನೇಮಕಾತಿ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆಗೆ ಶಿಫಾರಸು ಮಾಡಬೇಕು ಎಂಬ ಬೇಡಿಕೆಗಳನ್ನು ಈಡೇರಿಸಲು ಸ್ಥಳದಲ್ಲಿಯೇ ಆದೇಶ ಹೊರಡಿಸಿದರು.

ಅಂಗವಿಕಲರ ಇತರ ಬೇಡಿಕೆಗಳನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು. ಅದಕ್ಕೆ ಸಂಬಂಧಿಸಿದಂತೆ ಮಾರ್ಚ್ 13 ಅಥವಾ 14 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

ಅಹೋರಾತ್ರಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಅಂಗವಿಕಲರು ಹಿಂತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT