ಮಿಂಟೊ ಆಸ್ಪತ್ರೆಗೆ 125 ವರ್ಷ

ಬೆಂಗಳೂರು: ನೇತ್ರ ಚಿಕಿತ್ಸೆಯಲ್ಲಿ ಖ್ಯಾತಿ ಪಡೆದಿರುವ ಮಿಂಟೊ ಆಸ್ಪತ್ರೆ ಈಗ 125ನೇ ವರ್ಷದ ಸಂಭ್ರಮದಲ್ಲಿದೆ.
1896ರಲ್ಲಿ ಚಿಕ್ಕದಾಗಿ ಆರಂಭವಾದ ಈ ಆಸ್ಪತ್ರೆ ಯಲ್ಲಿ ಇಂದು, ರಾಜ್ಯ ಮತ್ತು ಹೊರರಾಜ್ಯಗಳ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡ ಲಾಗುತ್ತಿದೆ. ಪ್ರತಿದಿನ 500ರಿಂದ 800 ಹೊರರೋಗಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಪ್ರತಿ ವರ್ಷ ಸುಮಾರು 10 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಸಂಸ್ಥೆಯು ನಡೆಸುತ್ತಿದೆ.
ಮಂಗಳವಾರ ಬೆಳಿಗ್ಗೆ 10.30ಕ್ಕೆ 125ನೇ ವರ್ಷದ ಸಂಭ್ರಮಾಚರಣೆ ನಡೆಯಲಿದೆ. 125 ವರ್ಷದ ಅಂಗವಾಗಿ 125 ಸಸಿಗಳನ್ನು ನೆಡುವ ಮೂಲಕ ಪರಿಸರ ರಕ್ಷಣೆಯ ಸಂದೇಶವನ್ನು ಸಾರುವ ಪ್ರಯತ್ನ ಮಾಡಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.