ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳೆಗೆ ಮರ್ಮಾಂಗ ತೋರಿಸಿ ಅಸಭ್ಯ ವರ್ತನೆ: ಆರೋಪಿ ಸೆರೆ

Published 8 ಜುಲೈ 2024, 16:15 IST
Last Updated 8 ಜುಲೈ 2024, 16:15 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆಯಲ್ಲಿ ನಡೆದು ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ವಿ.ವಿ ಪುರಂ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಅಯೂಬ್‌ ರೆಹಮಾನ್‌(48) ಬಂಧಿತ ಆರೋಪಿ.

‘ಭಾನುವಾರ ಮಧ್ಯಾಹ್ನ ವಿ.ವಿ ಪುರಂನ ಮುಖ್ಯರಸ್ತೆಗೆ ಬೈಕ್‌ನಲ್ಲಿ ಬಂದಿದ್ದ ಆರೋಪಿ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಗೆ ಮರ್ಮಾಂಗ ತೋರಿಸಿದ್ದ. ಆರೋಪಿಯ ಅಸಭ್ಯ ವರ್ತನೆಯನ್ನು ಸ್ಥಳೀಯರು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದರು. ಅದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಅದನ್ನು ವಿ.ವಿ ಪುರಂ ಠಾಣೆ ಪೊಲೀಸರು ಗಮನಿಸಿದ್ದರು. ವಿಡಿಯೊ ಹಾಗೂ ಸಿಸಿ ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯವನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಆರೋಪಿ ಕಲಾಸಿಪಾಳ್ಯದಲ್ಲಿ ಟೀ ಅಂಗಡಿ ನಡೆಸುತ್ತಿದ್ದಾನೆ. ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಪುಂಡರ ಹಾವಳಿ:

‘ಠಾಣಾ ವ್ಯಾಪ್ತಿಯಲ್ಲಿ ಪುಂಡರ ಹಾವಳಿ ಮಿತಿಮೀರಿದೆ. ಮದ್ಯ ವ್ಯಸನಿಗಳು ಮಹಿಳೆಯರು ಹಾಗೂ ಯುವತಿಯರಿಗೆ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಪೊಲೀಸರು ಬಂಧಿಸಿರುವ ಆರೋಪಿ ಹಲವು ದಿನಗಳಿಂದ ಇದೇ ರೀತಿಯ ವರ್ತನೆ ತೋರುತ್ತಿದ್ದ’ ಎಂದು ಸ್ಥಳೀಯರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT