ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಬಾರ ಹೆಸರಿನಲ್ಲಿ ಹಣ ಕೇಳಿ ಅಪಪ್ರಚಾರ

Last Updated 2 ಜೂನ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಾಹಿತಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ಸಂದೇಶ ಕಳುಹಿಸಿ ಹಣ ಕೇಳುತ್ತಿರುವ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೂ ಆದ ಚಂದ್ರಶೇಖರ ಕಂಬಾರ ಅವರು ಬುಧವಾರ (ಜೂನ್ 1) ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಚಂದ್ರಶೇಖರ ಕಂಬಾರ ಅವರ ಹೆಸರು, ವಿಳಾಸ ಹಾಗೂ ಫೋಟೊ ಬಳಸಿಕೊಂಡು ಕೆಲವರ ಮೊಬೈಲ್‌ಗಳಿಗೆ ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಲಾಗಿದೆ. ‘ನಾನು ಕಷ್ಟದಲ್ಲಿದ್ದೇನೆ. ನನಗೆ ಧನಸಹಾಯ ಮಾಡಿ’ ಎಂಬುದಾಗಿ ಸಂದೇಶದಲ್ಲಿ ಬರೆಯಲಾಗಿದೆ.’

‘ನಕಲಿ ದಾಖಲೆ ಬಳಸಿ ಸಿಮ್‌ಕಾರ್ಡ್ ಖರೀದಿಸಿರುವ ವಂಚಕರು, ಅವುಗಳನ್ನು ಬಳಸಿಕೊಂಡು ಸಂದೇಶ ಕಳುಹಿಸಿದ್ದಾರೆ. ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದೂ ತಿಳಿಸಿದರು.

ಹೆಸರು ದುರುಪಯೋಗ: ‘ನನ್ನ ಹೆಸರು ದುರುಪಯೋಗಪಡಿಸಿಕೊಂಡು, ಅಪಪ್ರಚಾರ ಮಾಡಲಾಗುತ್ತಿದೆ. ಧನಸಹಾಯದ ಬಗ್ಗೆ ಬರುವ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು’ ಎಂದು ಚಂದ್ರಶೇಖರ ಕಂಬಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT