ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಡಿಸಿಎಂ ಡಿಕೆಶಿ ಚಾಲನೆ

Published 7 ಆಗಸ್ಟ್ 2023, 14:33 IST
Last Updated 7 ಆಗಸ್ಟ್ 2023, 14:33 IST
ಅಕ್ಷರ ಗಾತ್ರ

ಬೆಂಗಳೂರು: ’ಎಲ್ಲರೂ ಆರೋಗ್ಯದಿಂದ ಇರಬೇಕು. ಮುಂದಿನ ಪೀಳಿಗೆ ಕೂಡ ಆರೋಗ್ಯಕರ ದೇಹ ಹೊಂದಿರಬೇಕು ಎಂಬ ಚಿಂತನೆಯಿಂದ ಮಿಷನ್ ಇಂದ್ರಧನುಷ್ 5.0 ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶಾಂತಿನಗರದ ಆಸ್ಟಿನ್ ಟೌನ್ ಹೆರಿಗೆ ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪರಿಣಾಮಕಾರಿ ಮಿಷನ್ ಇಂದ್ರಧನುಷ್– 5.0 ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

’ಈ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಲು ಆ.9ರಂದು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಲಾಗುವುದು. ಅದಕ್ಕಿಂತ ಮೊದಲು ಜನರಿಂದ ಅಹವಾಲುಗಳನ್ನು ಆಲಿಸಲು, ಸಮಸ್ಯೆಗಳನ್ನು ಕೇಳಲು ಮಂಗಳವಾರ ಬೆಳಿಗ್ಗೆ 9ಕ್ಕೆ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಎನ್.ಎ. ಹ್ಯಾರಿಸ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ (ಆರೋಗ್ಯ) ಡಾ. ಕೆ.ವಿ. ತ್ರಿಲೋಕ್ ಚಂದ್ರ, ಜಂಟಿ ಆಯುಕ್ತರಾದ (ಪೂರ್ವ) ಪಲ್ಲವಿ, ಮುಖ್ಯ ಆರೋಗ್ಯಾಧಿಕಾರಿ (ಸಾರ್ವಜನಿಕ ಆರೋಗ್ಯ) ಡಾ. ಬಾಲಸುಂದರ್, ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ಡಾ. ನಿರ್ಮಲಾ ಬುಗ್ಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT