ಬೆಂಗಳೂರು: ಭಾರಿ ಮಳೆಗೆ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಆಸ್ತಿಗಳು ಹಾನಿಗೊಳಗಾಗಿದ್ದು, ತುರ್ತು ಕ್ರಮ ತೆಗೆದುಕೊಳ್ಳುವುದರ ಜೊತೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯ ಕ್ಷೇತ್ರಗಳ ಶಾಸಕ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಅವರಿಗೆ ಪತ್ರ ಬರೆದಿರುವ ಅವರು,ಬೇಸಿಗೆ ಮಳೆಗೆ ಮಂಡ್ಯ ಜಿಲ್ಲೆ ತತ್ತರಿಸಿ ಹೋಗಿದೆ. ಜಿಲ್ಲೆಯ ಏಳೂ ತಾಲೂಕುಗಳು ಸಹ ಮಳೆಯಿಂದಾಗಿ ತೀವ್ರ ಹಾನಿಗೊಳಪಟ್ಟಿವೆ. ಜನ-ಜಾನುವಾರುಗಳಿಗೆ ತೀವ್ರ ತೊಂದರೆಯಾಗಿದೆ. ಸರ್ಕಾರ ಹಾಗೂ ನಾಗರಿಕರ ಆಸ್ತಿಗಳಿಗೆ ಹಾನಿಯಾಗಿದೆ. ಮುಂಗಾರು ಪೂರ್ವದಮಳೆಗೇ ಈ ರೀತಿ ಅವಾಂತರಗಳು ಸಂಭವಿಸಿದರೆ, ಮುಂಗಾರು ಆರಂಭವಾದ ಮೇಲೆ ನಾಗರಿಕರ ಗತಿ ಏನು..? ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಹೇಳಿದ್ದಾರೆ.

ಶಿಥಿಲಾವಸ್ಥೆ ತಲುಪಿರುವ ಶಾಲಾ ಕಟ್ಟಡಗಳು ಬೀಳುವ ಸ್ಥಿತಿಯಲ್ಲಿವೆ. ಶಿಥಿಲಾವಸ್ಥೆ ತಲುಪಿದ ಶಾಲೆಗಳನ್ನು ಗುರುತಿಸಿ ಅವುಗಳನ್ನು ದುರಸ್ತಿಗೆ ಮುಂದಾಗಬೇಕಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.