ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಕ್ಯಾಸಿನೋ ವಿರುದ್ಧ ಕ್ರಮಕ್ಕೆ ಜಾರ್ಜ್‌ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ತಾವು ಪ್ರತಿನಧಿಸುವ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಚ್‌ಆರ್‌ಬಿಆರ್‌ ಬಡಾವಣೆಯ ಸರ್ವಿಸ್‌ ರಸ್ತೆ ಮತ್ತು ಕಮ್ಮನಹಳ್ಳಿಯಲ್ಲಿ ಇತ್ತೀಚೆಗೆ ಎರಡು ಕ್ಯಾಸಿನೋ ಜೂಜು ಅಡ್ಡೆಗಳು ಆರಂಭವಾಗಿದ್ದು, ಅವುಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಥಳೀಯ ಶಾಸಕ ಕೆ.ಜೆ. ಜಾರ್ಜ್‌ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಮತ್ತು ನಗರ ಪೊಲೀಸ್‌ ಕಮಿಷನರ್‌ಗೆ ಪತ್ರ ಬರೆದಿದ್ದಾರೆ.

ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಮತ್ತು ಪೊಲೀಸ್ ಕಮಿಷನರ್‌ ಕಮಲ್‌ ಪಂತ್‌ ಅವರಿಗೆ ಗುರುವಾರ ಪತ್ರ ಬರೆದಿರುವ ಜಾರ್ಜ್‌, ‘ಕಾನೂನುಬಾಹಿರವಾಗಿ ಎರಡು ಕ್ಯಾಸಿನೋಗಳು ತಲೆ ಎತ್ತಿವೆ. ಇದರಿಂದ ಕ್ಷೇತ್ರದ ಜನರು ಆತಂಕಕ್ಕೊಳಗಾಗಿದ್ದಾರೆ. ಈ ಜೂಜು ಕೇಂದ್ರಗಳಿಂದ ಹಲವು ಕುಟುಂಬಗಳು ಆರ್ಥಿಕವಾಗಿ ದಿವಾಳಿಯಾಗುತ್ತಿದ್ದು, ಅಪರಾಧ ಕೃತ್ಯಗಳೂ ಹೆಚ್ಚುತ್ತಿವೆ’ ಎಂದು ದೂರಿದ್ದಾರೆ.

ಈ ಜೂಜು ಕೇಂದ್ರಗಳನ್ನು ಮುಚ್ಚಿಸಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ರಕ್ಷಣೆಯ ಭರವಸೆ ಮೂಡುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು