ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಅಧಿವೇಶನ ಮುಂದೂಡಲು ಎಂ.ಪಿ. ಕುಮಾರಸ್ವಾಮಿ ಮನವಿ

Last Updated 30 ನವೆಂಬರ್ 2021, 16:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸುವ ನಿರ್ಧಾರವನ್ನು ಪುನರ್‌ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಶಾಸಕರು, ಅಧಿಕಾರಿಗಳು, ನೌಕರರು ಎಲ್ಲರಲ್ಲೂ ಆತಂಕವಿದೆ. ಹಿಂದೆ ಕೋವಿಡ್‌ನಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ನಾನು ಕೂಡ ಪ್ರಾಣಾಪಾಯಕ್ಕೆ ಒಳಗಾಗಿದ್ದೆ. ಇಂತಹ ಸನ್ನಿವೇಶದಲ್ಲಿ ಬೆಂಗಳೂರಿನಲ್ಲಿ ಅಧಿವೇಶನ ನಡೆಸಿದರೆ ಉತ್ತಮ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT