ಗುರುವಾರ , ಸೆಪ್ಟೆಂಬರ್ 16, 2021
29 °C

ಎಲ್ಇಡಿ ಬೀದಿದೀಪ ಅಳವಡಿಕೆ ಕಾಮಗಾರಿ ಚುರುಕುಗೊಳಿಸಿ: ಶಾಸಕ ಆರ್. ಮಂಜುನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಿರುವ ಬೀದಿದೀಪಗಳಿಗೆ ಬದಲಾಗಿ ಎಲ್‌ಇಡಿ ದೀಪಗಳನ್ನು ಅಳವಡಿಸುವ ಕಾಮಗಾರಿಯ ಅನುಷ್ಠಾನಕ್ಕೆ ಮೀನಮೇಷ ಎಣಿಸಲಾಗುತ್ತಿದೆ. ದಾಸರಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಕಾಮಗಾರಿಗೆ ಕೂಡಲೇ ಚಾಲನೆ ನೀಡಬೇಕು’ ಎಂದು ಈ ಕ್ಷೇತ್ರದ ಶಾಸಕ ಆರ್. ಮಂಜುನಾಥ್ ಒತ್ತಾಯಿಸಿದ್ದಾರೆ.

‘ಈಗಿರುವ ಬೀದಿದೀಪಗಳನ್ನು ಎಲ್‌ಇಡಿ ದೀಪಗಳನ್ನಾಗಿ ಬದಲಿಸಲು ಒಂಟಿ ಪ್ಯಾಕೇಜ್‌ ಅಡಿ ಜಾಗತಿಕ ಟೆಂಡರ್‌ ಕರೆಯಲಾಗಿತ್ತು. ಈ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾದೇಶ ನೀಡಿ ಎರಡು ವರ್ಷಗಳು ಕಳೆದರೂ ಕಾಮಗಾರಿ ಅನುಷ್ಠಾನಗೊಂಡಿಲ್ಲ. ಬೀದಿ ದೀಪಗಳು ಇಲ್ಲದ ಕಾರಣ, ದಾಸರಹಳ್ಳಿ ವ್ಯಾಪ್ತಿಯಲ್ಲಿ ರಾತ್ರಿಯ ವೇಳೆ ರಸ್ತೆ ಅಪಘಾತ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ’ ಎಂದು ಅವರು ಹೇಳಿದ್ದಾರೆ.

‘ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಬಿಬಿಎಂಪಿ ವಿದ್ಯುತ್‌ ವಿಭಾಗದ ವತಿಯಿಂದ ಬೀದಿ ದೀಪಗಳನ್ನು ಖರೀದಿಸಲು ಸೂಕ್ತ ಅನುದಾನ ಒದಗಿಸಲು ಸಂಬಂಧಪಟ್ಟವರಿಗೆ ಸೂಚಿಸಬೇಕು’ ಎಂದು ಬಿಬಿಎಂಪಿ ಆಡಳಿತಾಧಿಕಾರಿಯವರಿಗೆ ಅವರು ಪತ್ರ ಬರೆದಿದ್ದಾರೆ.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು