ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ: ಅಧಿವೇಶನ ಬುಧವಾರದವರೆಗೆ ವಿಸ್ತರಣೆ

Published 25 ಫೆಬ್ರುವರಿ 2024, 15:49 IST
Last Updated 25 ಫೆಬ್ರುವರಿ 2024, 15:49 IST
ಅಕ್ಷರ ಗಾತ್ರ

ಬೆಂಗಳೂರು: ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿಧನರಾಗಿರುವ ಕಾರಣದಿಂದ ವಿಧಾನಮಂಡಲ ಅಧಿವೇಶನವು ಬುಧವಾರದವರೆಗೆ ವಿಸ್ತರಣೆಯಾಗಲಿದೆ.

ಬಜೆಟ್‌ ಮೇಲಿನ ಚರ್ಚೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉತ್ತರ ನೀಡಬೇಕಿತ್ತು. ಆ ಬಳಿಕ ಬಜೆಟ್‌ ಮತ್ತು ಪ್ರಸಕ್ತ ವರ್ಷದ ಪೂರಕ ಅಂದಾಜುಗಳಿಗೆ ಒಪ್ಪಿಗೆ ಪಡೆದು, ಅಧಿವೇಶನವನ್ನು ಮುಕ್ತಾಯಗೊಳಿಸಲು ತೀರ್ಮಾನಿಸಲಾಗಿತ್ತು.

ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಸಿದ್ದರಾಮಯ್ಯ, ‘ಹಾಲಿ ಶಾಸಕ ನಿಧನರಾಗಿರುವುದರಿಂದ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಕಲಾಪ ನಡೆಯುವುದಿಲ್ಲ, ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT