ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್: ಶಾಸಕ ರಿಜ್ವಾನ್‌ ಅರ್ಷದ್‌ ಅನರ್ಹತೆಗೆ ಕೋರಿದ ಅರ್ಜಿ ವಜಾ

Published 26 ಮಾರ್ಚ್ 2024, 12:59 IST
Last Updated 26 ಮಾರ್ಚ್ 2024, 12:59 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 

ಈ ಸಂಬಂಧ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಇದೇ 13ರಂದು ಕಾಯ್ದಿರಿಸಿದ್ದ ನಿರ್ಣಯವನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಘೋಷಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಅರ್ಜಿಯಲ್ಲಿ ಏನಿತ್ತು?: ‘ಕಾಂಗ್ರೆಸ್ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಇವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕುವಂತೆ ಮತದಾರರನ್ನು ಪ್ರೇರೇಪಿಸಿವೆ. ಈ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

‘ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 123(1), 123(2), 123(4), 1236(6) ಅಡಿ ರಿಜ್ವಾನ್‌ ಅರ್ಷದ್‌ ಚುನಾವಣಾ ಅಕ್ರಮಗಳನ್ನು ಎಸಗಿದ್ದು, ಕಲಂ 100(1)(ಬಿ), (1)(ಡಿ)(iv) ಅಡಿ ಆಯ್ಕೆಯಾಗಲು ಅರ್ಹರಲ್ಲ. ಹಾಗಾಗಿ, ಆರು ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸದಂತೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು. 

‘ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿರುವುದು ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 123 (1)ರ ಪ್ರಕಾರ ಮತ್ತು ಕಲಂ 123 (2)ರ ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಕಲಂ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಹೀಗಾಗಿ, ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ರಿಜ್ವಾನ್ ಅರ್ಷದ್ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು’ ಎಂದು ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT