ಸೋಮವಾರ, ಜನವರಿ 24, 2022
20 °C

ನನ್ನ ಕೊಲೆಯ ಸಂಚಿನ ಸುಳಿವು ಲಭಿಸಿತ್ತು: ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನನ್ನ ಕೊಲೆಗೆ ಸಂಚು ನಡೆಯುತ್ತಿರುವ ಸುಳಿವು ಮೊದಲೇ ಲಭಿಸಿತ್ತು. ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೂ ತಂದಿದ್ದೆ. ಕುಳ್ಳ ದೇವರಾಜ್‌ ಮಂಗಳವಾರ ಸಂಜೆ ಕ್ಷಮಾಪಣೆ ಪತ್ರ ಕಳುಹಿಸಿದಾಗ ಖಚಿತವಾಯಿತು’ ಎಂದು ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಲಹಂಕದಲ್ಲಿ ನನ್ನನ್ನು ರಾಜಕೀಯವಾಗಿ ಸೋಲಿಸಲು ಆಗುವುದಿಲ್ಲ ಎಂಬ ಕಾರಣಕ್ಕೆ ಎಂ.ಎನ್‌.ಗೋಪಾಲಕೃಷ್ಣ ಈ ಪ್ರಯತ್ನ ಮಾಡಿದ್ದಾನೆ. ಕುಳ್ಳ ದೇವರಾಜ್‌ ಅಪರಾಧಿ ಹಿನ್ನೆಲೆಯ ವ್ಯಕ್ತಿ. ಆತನನ್ನು ಬಳಸಿಕೊಂಡು ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ನನ್ನ ಕೊಲೆಗೆ ಸಂಚು ರೂಪಿಸಿದ್ದರು’ ಎಂದು ಆರೋಪಿಸಿದರು.

ಹಲ್ಲೆ ನಡೆಯುವ ಅನುಮಾನ ಇತ್ತು. ಇದೇ ಕಾರಣಕ್ಕಾಗಿ ಭದ್ರತೆ ಒದಗಿಸುವಂತೆ ಪೊಲೀಸ್‌ ಇಲಾಖೆಗೆ ನಾಲ್ಕು ಬಾರಿ ಪತ್ರ ಬರೆಯಲಾಗಿತ್ತು. ಕಾಂಗ್ರೆಸ್‌ ಸರ್ಕಾರ ಇದ್ದಾಗ ದುರುದ್ದೇಶದಿಂದ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಡಬಗೆರೆ ಶ್ರೀನಿವಾಸ್‌ ತಮ್ಮ ಜತೆಗೆ ಇದ್ದ ವ್ಯಕ್ತಿ. ಆತನ ಹತ್ಯೆಗೂ ತಮಗೂ ಸಂಬಂಧವಿಲ್ಲ. ಎಲ್ಲ ಪ್ರಕರಣಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನನ್ನ ಹತ್ಯೆಗೆ ಕಾಂಗ್ರೆಸ್ ನಾಯಕನಿಂದ ಸಂಚು: ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು