ಶುಕ್ರವಾರ, ಏಪ್ರಿಲ್ 16, 2021
31 °C

ಮಹಿಳೆಗೆ ಮುಕ್ತ ಅವಕಾಶ ಸಿಗಲಿ: ಎಸ್.ಆರ್.ವಿಶ್ವನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ‘ಮಹಿಳೆಯರಲ್ಲಿ ಸುಪ್ತವಾದ ಪ್ರತಿಭೆಯಿದ್ದು, ಅದನ್ನು ಹೊರಗೆ ತರಬೇಕಾದರೆ ಎಲ್ಲ ರಂಗಗಳಲ್ಲಿಯೂ ಅವರಿಗೆ ಮುಕ್ತ ಅವಕಾಶಗಳನ್ನು ಕಲ್ಪಿಸಬೇಕು’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ಬಿಜೆಪಿ ಮಹಿಳಾ ಮೋರ್ಚಾ ಯಲಹಂಕ ಕ್ಷೇತ್ರ, ಸಿಂಗನಾಯಕನಹಳ್ಳಿ ರೈತರಸೇವಾ ಸಹಕಾರ ಸಂಘ, ವಿಶ್ವವಾಣಿ ಫೌಂಡೇಶನ್ ಹಾಗೂ ರೋಟರಿ ಕ್ಲಬ್ ಆಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. 

‘ಕ್ಷೇತ್ರವ್ಯಾಪ್ತಿಯಲ್ಲಿ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಶೇ.50ಕ್ಕಿಂತ ಹೆಚ್ಚಿನ ಮಹಿಳೆಯರು ಗೆಲುವು ಸಾಧಿಸುವ ಮೂಲಕ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಅವರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು' ಎಂದು ತಿಳಿಸಿದರು.

ಸಿಂಗನಾಯಕನಹಳ್ಳಿ ರೈತರಸೇವಾ ಸಹಕಾರ ಸಂಘದ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ‘ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಮಹಿಳೆಯರು ಕುಟುಂಬಗಳ ನಿರ್ವಹಣೆಯ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ’ ಎಂದರು.

ಬಿಜೆಪಿ ರಾಜ್ಯ ಮಹಿಳಾಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ಎಂ.ಸತೀಶ್, ಡಾ.ಗೀತಾಶಶಿಕುಮಾರ್, ನೇತ್ರ ಪಲ್ಲವಿ, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಹನುಮಯ್ಯ, ಆಶಾರಾವ್, ಬೃಂದಾ ವೀರೇಶ್ ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು