ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಪೊಲೀಸ್ ವಶಕ್ಕೆ ಶಾಸಕ ವಿ.ಸುನಿಲ್ ಕುಮಾರ್

Published 4 ಜನವರಿ 2024, 4:08 IST
Last Updated 4 ಜನವರಿ 2024, 4:08 IST
ಅಕ್ಷರ ಗಾತ್ರ

ಬೆಂಗಳೂರು:'ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕರೂ‌ ಆಗಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು.‌‌

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ’ ಎಂದು ಆಕ್ರೋಶ ಹೊರಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT