ಬೆಂಗಳೂರು: ಬೆಳ್ಳಂದೂರು ಸಂಚಾರ ಠಾಣೆ ವ್ಯಾಪ್ತಿಯಲ್ಲಿರುವ ಹೊರವರ್ತುಲ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಅವರ ಮಗ ಹೇಮಂತ್ (19) ಗಾಯಗೊಂಡಿದ್ದಾರೆ.

ಹೇಮಂತ್ ಅವರು ಬೆಳಿಗ್ಗೆ 5 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಹೊರಟಿದ್ದರು. ಮಾರ್ಗಮಧ್ಯೆಯೇ ನಿಯಂತ್ರಣ ತಪ್ಪಿ ಬೈಕ್ ಉರುಳಿ ಬಿದ್ದಿದೆ. ಇದರಿಂದಾಗಿ, ಬೈಕ್ ಸಮೇತ ರಸ್ತೆಯಲ್ಲಿ ಉರುಳಿ ಬಿದ್ದು ಹೇಮಂತ್ ಗಾಯಗೊಂಡಿದ್ದಾರೆ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಹೇಮಂತ್ ಅವರ ಕಾಲಿಗೆ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಕ್ಕೆ ಅಪಾಯವಿಲ್ಲವೆಂದು ವೈದ್ಯರು ಹೇಳಿದ್ದಾರೆ. ಬೆಳ್ಳಂದೂರು ಸಂಚಾರ ಠಾಣೆ ಪೊಲೀಸರು ಅಪಘಾತದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.