ಗುರುವಾರ , ಫೆಬ್ರವರಿ 27, 2020
19 °C

ಸರಣಿ ಅಪಘಾತ: ಪೊಲೀಸ್‌ ವಿಚಾರಣೆಗೆ ಹಾಜರಾದ ಶಾಸಕ ಹ್ಯಾರಿಸ್‌ ಮಗ ಮೊಹ್ಮದ್ ನಲಪಾಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇಖ್ರಿ ವೃತ್ತದ ಕಳೆಸೇತುವೆ ಬಳಿ ಭಾನುವಾರ (ಫೆ. 9) ಮಧ್ಯಾಹ್ನ ಸಂಭವಿಸಿದ್ದ ಸರಣಿ ಅಪಘಾತಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಶಾಸಕ ಎನ್‌.ಎ. ಹ್ಯಾರಿಸ್‌ ಮಗ ಮೊಹ್ಮದ್‌ ನಲಪಾಡ್‌ ಬುಧವಾರ ವಿಚಾರಣೆಗೆ ಹಾಜರಾದರು.

ಪ್ರಕರಣದ ತನಿಖಾಧಿಕಾರಿ ಬಿ.ಪಿ. ನಾಗರಾಜು ಅವರು ನಲಪಾಡ್‌ ಅವರ ಹೇಳಿಕೆಯನ್ನು ದಾಖಲಿಕೊಂಡರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನಲಪಾಡ್‌ ಅವರಿಗೆ ಮಂಗಳವಾರ ನೋಟಿಸ್‌ ನೀಡಿದ್ದರು.

ಸಂಚಾರ ವಿಭಾಗದ ಜಂಟಿ ಕಮಿಷನರ್‌ ಬಿ.ಆರ್‌. ರವಿಕಾಂತೇಗೌಡ ಮಾತನಾಡಿ, ’ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ನಲಪಾಡ್‌ ಅವರನ್ನು ಬಂಧಿಸಿ, ಬಾಂಡ್‌ ಬರೆಸಿಕೊಂಡು ಠಾಣಾ ಜಾಮೀನು (ಸ್ಟೇಷನ್‌ ಬೇಲ್‌) ನೀಡಿದ್ದೇವೆ’ ಎಂದು ತಿಳಿಸಿದರು.

‘ನಲಪಾಡ್‌ ಕಾರು ಚಲಾಯಿಸಿಲ್ಲ. ಬೇರೊಬ್ಬ ವ್ಯಕ್ತಿ ಕಾರು ಚಲಾಯಿಸುತ್ತಿದ್ದರು. ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ’ ಎಂದು ನಲಪಾಡ್‌ ಪರ ವಕೀಲ ಉಸ್ಮಾನ್‌ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು