ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆ ದತ್ತು ತೆಗೆದುಕೊಳ್ಳಲಿ: ಹೊರಟ್ಟಿ

Last Updated 25 ಜನವರಿ 2023, 19:49 IST
ಅಕ್ಷರ ಗಾತ್ರ

ಕೊಪ್ಪಳ: ‘ಸರ್ಕಾರಿ ಶಾಲೆಗಳನ್ನು ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ದತ್ತು ತೆಗೆದುಕೊಳ್ಳಬೇಕು. ಅಧಿಕಾರಿಯೊಬ್ಬನ ಮಾತು ಕೇಳಿಕೊಂಡು ಜನಪರವಲ್ಲದ ಯೋಜನೆಗಳನ್ನು ಜಾರಿಗೆ ತಂದರೆ ಯಾರಿಗೂ ಪ್ರಯೋಜನವಾಗದು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

‘ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಿದರೆ ಶಿಕ್ಷಣ ಕ್ಷೇತ್ರ ಸುಧಾರಿಸುತ್ತದೆ. ಒಬ್ಬ ಶಿಕ್ಷಕ ನಿವೃತ್ತರಾದರೆ, ಮರುದಿನ ಇನ್ನೊಬ್ಬ ಶಿಕ್ಷಕನ ನೇಮಕಾತಿ ಅಗಬೇಕು. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರ ನೇಮಕಾತಿಗೆ ಸರ್ಕಾರ ಚುರುಕಾಗಬೇಕು’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

‘ಸರ್ಕಾರಿ ನೌಕರರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲೇ ಶಿಕ್ಷಣ ಕೊಡಿಸಬೇಕು ಎಂಬ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಆಗಾಗ್ಗೆ ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT