ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್‌ಗೆ ಒಪ್ಪದೆ ಎಂಎಲ್‌ಸಿ ಓಡಾಟ?

Last Updated 2 ಮೇ 2020, 20:26 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌–19 ಸೋಂಕು ದೃಢಪಟ್ಟಿರುವ ಟಿವಿ ಸುದ್ದಿವಾಹಿನಿಯ ಕ್ಯಾಮೆರಾಮನ್‌ ಜತೆಗೆ ಸಂಪರ್ಕ ಹೊಂದಿದ್ದ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯರೊಬ್ಬರು ಕ್ವಾರಂಟೈನ್‌ಗೆ ಒಳಗಾಗದೆ ಓಡಾಡುತ್ತಿದ್ದಾರೆಂದು ಹೇಳಲಾಗುತ್ತಿದ್ದು, ಭೀತಿ ಆವರಿಸಿದೆ.

ಇದೇ ಪತ್ರಕರ್ತರ ಸಂಪರ್ಕಕ್ಕೆ ಬಂದಿದ್ದ ಐವರು ಸಚಿವರು ಪರೀಕ್ಷೆಗೆ ಒಳಗಾಗಿದ್ದು, ಸೋಂಕು ಇಲ್ಲ ಎಂದು ದೃಢಪಟ್ಟಿದೆ. ಹಾಗಿದ್ದರೂ ಅವರ ಪೈಕಿ ನಾಲ್ವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಅದೇ ದಿನ ಸಚಿವರ ಪಟ್ಟಿಯ ಜತೆಗೆ ಈ ವಿಧಾನ ಪರಿಷತ್‌ ಸದಸ್ಯರ ಹೆಸರು ಸಹ ಇತ್ತು ಎಂದು ಹೇಳಲಾಗುತ್ತಿದೆ.

‘ನನಗೆ ಏನೂ ಆಗಿಲ್ಲ, ನಾನು ಆರೋಗ್ಯವಾಗಿಯೇ ಇದ್ದೇನೆ’ ಎಂದು ಸದಸ್ಯರು ಹೇಳಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT