ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಸ್ವಂತ ಬಲದ ಮೇಲೆ ನಂಬಿಕೆ ಇಲ್ಲ: ಡಿ.ಕೆ. ಶಿವಕುಮಾರ್‌

Last Updated 7 ಡಿಸೆಂಬರ್ 2021, 9:22 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಅಧಿಕಾರದಲ್ಲಿರುವ ಬಿಜೆಪಿಗೆ ಸ್ವಂತ ಬಲದ ಮೇಲೆ ನಂಬಿಕೆ ಇಲ್ಲ. ಈ ಕಾರಣಕ್ಕಾಗಿ ಬಿಜೆಪಿ ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಶಿವಮೊಗ್ಗ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲಿನ ಸುಳಿಯಲ್ಲಿದ್ದಾರೆ. ಈ ಕಾರಣದಿಂದ ಜೆಡಿಎಸ್‌ ಬೆಂಬಲ ಪಡೆಯಲು ಆ ಪಕ್ಷದ ನಾಯಕರು ಯತ್ನಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಎಲ್ಲ ಸಂದರ್ಭದಲ್ಲೂ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದೆ. ಆದರೆ, ಜೆಡಿಎಸ್‌ ಜತೆ ವಿಷಯಾಧಾರಿತವಾಗಿ ಹೊಂದಾಣಿಕೆ ಮಾಡಿಕೊಂಡಿದೆ. ಕೆಲವೆಡೆ ವಿರೋಧವನ್ನೂ ಮಾಡಿದೆ. ಕೆಲವೇ ದಿನಗಳ ಹಿಂದೆ ಜೆಡಿಎಸ್‌ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ನಾಯಕರೇ ಈಗ ಮೈತ್ರಿಗಾಗಿ ಮುಂದೆ ಬಂದಿದ್ದಾರೆ. ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ಹೇಳಿದರು.

ಬಿಜೆಪಿಯಲ್ಲಿ ಗೊಂದಲದ ವಾತಾವರಣ ಇದೆ. ಬಿ.ಎಸ್‌. ಯಡಿಯೂರಪ್ಪ ಅವರು ಜೆಡಿಎಸ್‌ ಜತೆ ಮೈತ್ರಿಯ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತದ್ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಯಾವ ಜಿಲ್ಲೆಯಲ್ಲೂ ಬಿಜೆಪಿಯವರು ಜೆಡಿಎಸ್‌ಗೆ ಮತ್ತು ಜೆಡಿಎಸ್‌ನವರು ಬಿಜೆಪಿಗೆ ಮತ ಚಲಾವಣೆ ಮಾಡುವ ಪರಿಸ್ಥಿತಿ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT