ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌: ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ

ಬೆಂಗಳೂರು ನಗರ ಕ್ಷೇತ್ರದ ಚುನಾವಣೆ
Last Updated 13 ಡಿಸೆಂಬರ್ 2021, 22:02 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗಾಗಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ನಗರದ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ಮತಪೆಟ್ಟಿಗೆಗಳನ್ನು ಮತ ಎಣಿಕಾ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಮಂಗಳವಾರ ಬೆಳಿಗ್ಗೆ 7.30ಕ್ಕೆ ಅಭ್ಯರ್ಥಿಗಳ ಹಾಗೂ ಚುನಾವಣಾ ವೀಕ್ಷಕರ ಸಮಕ್ಷಮದಲ್ಲಿ ಭದ್ರತಾ ಕೊಠಡಿಯನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

ಮತ ಎಣಿಕಾ ಕೊಠಡಿಯಲ್ಲಿ ಒಟ್ಟು ಏಳು ಟೇಬಲ್‌ಗಳನ್ನು ಜೋಡಿಸಲಾಗಿದ್ದು. ಪ್ರತಿ ಟೇಬಲ್‌ಗೆ ಇಬ್ಬರು ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಭ್ಯರ್ಥಿ ಪರ ಒಬ್ಬ ಏಜೆಂಟ್‌ಗೆ ಅವಕಾಶ ಕಲ್ಪಿಸಲಾಗಿದೆ.ಕೋವಿಡ್ ನಿಯಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಮತ ಎಣಿಕಾ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮತಪೆಟ್ಟಿಗೆಯಿಂದ ಎಲ್ಲ ಮತಪತ್ರಗಳನ್ನು ಹೊರತೆಗೆದು ವೀಕ್ಷಕರ ಹಾಗೂ ಏಜೆಂಟರ ಮುಂದೆಯೇ ತಲಾ 25 ಮತಪತ್ರಗಳ ಕಟ್ಟುಗಳನ್ನು ರಚಿಸಿ ದೊಡ್ಡ ಪಾತ್ರೆಯಲ್ಲಿ ಮಿಶ್ರ ಮಾಡಲಾಗುತ್ತದೆ. ಒಟ್ಟು 2070 ಮತಗಳು ಚಲಾವಣೆಯಾಗಿದ್ದು, ಪ್ರತಿ ಟೇಬಲ್‌ಗೆ ತಲಾ 300 ಮತಪತ್ರಗಳನ್ನು ಎಣಿಕೆಗೆ ಹಂಚಿಕೆ ಮಾಡಲಾಗುವುದು. ಸಿಂಧು ಮತ್ತು ಅಸಿಂಧು ಮತಪತ್ರಗಳನ್ನು ಬೇರ್ಪಡಿಸಲಾಗುವುದು. ನಂತರ, ಸಿಂಧು ಮತಪತ್ರಗಳನ್ನು ಆದ್ಯತೆ ಆಧಾರದಲ್ಲಿ ಎಣಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT