ಮೊಬೈಲ್, ಬ್ಯಾಗ್ ಕದ್ದಿದ್ದ ಇಬ್ಬರ ಬಂಧನ
ಬೆಂಗಳೂರು: ರಸ್ತೆಯಲ್ಲಿ ಒಂಟಿಯಾಗಿ ಹೋಗುವ ಮಹಿಳೆಯರನ್ನು ಹಿಂಬಾಲಿಸಿ, ಮೊಬೈಲ್ ಹಾಗೂ ಹ್ಯಾಂಡ್ ಬ್ಯಾಗ್ ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಜೀವನ್‌ಬಿಮಾ ನಗರ ಪೊಲೀಸರು ಬಂಧಿಸಿದ್ದಾರೆ.
ಸೂರ್ಯ ಮತ್ತು ಕಿರಣ್ ಬಂಧಿತರು.
ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಉದ್ಯಾನದ ರಸ್ತೆಯಲ್ಲಿ ಮಹಿಳೆಯೊಬ್ಬರನ್ನು ಹಿಂಬಾಲಿಸಿದ್ದ ಆರೋಪಿಗಳು, ಅವರ ಮೊಬೈಲ್ ಹಾಗೂ ಬ್ಯಾಗ್ ಕಸಿದು ಬೈಕ್‌ನಲ್ಲಿ ಪರಾರಿಯಾಗಿದ್ದರು. ಈ ಸಂಬಂಧ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರು.
‘ತನಿಖೆ ವೇಳೆ ಸಿಸಿಟಿವಿ ದೃಶ್ಯಾವಳಿಗಳು ಆರೋಪಿಗಳ ಸುಳಿವು ನೀಡಿತ್ತು. ಆರೋಪಿಗಳು ಬಳಸಿದ್ದ ಸ್ಕೂಟರ್ ಮೇಲೆ ಅಂಟಿಸಿದ್ದ ಸ್ಟಿಕರ್‌ಗಳ ಸಹಾಯದಿಂದ ಅವರನ್ನು ಶೀಘ್ರವಾಗಿ ಸೆರೆಹಿಡಿಯಲಾಯಿತು’.
‘ಆರೋಪಿಗಳಿಂದ ಒಂದು ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಹೋಂಡಾ ಆ್ಯಕ್ಟೀವ ಸ್ಕೂಟರ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಈ ಹಿಂದೆಯೂ ಹಲವು ಸುಲಿಗೆ ಮಾಡಿರುವ ಶಂಕೆಯಿದ್ದು, ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.