ಬೆಂಗಳೂರು: ಪಾದಚಾರಿಗಳಿಂದ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಕಾಮಾಕ್ಷಿಪಾಳ್ಯದ ಚರಣ್ (20), ನಂದಾ (21) ಬಂಧಿತರು.
ಕಾವೇರಿಪುರದಲ್ಲಿ ಮನೆಗೆ ನಡೆದು ತೆರಳುತ್ತಿದ್ದವರಿಂದ ಮೊಬೈಲ್ ಕಸಿದುಕೊಂಡು ಕ್ಷಣಾರ್ಧದಲ್ಲಿ ಇಬ್ಬರು ಪರಾರಿಯಾಗುತ್ತಿದ್ದರು. ಬಂಧಿತರಿಂದ ಒನ್‌ಪ್ಲಸ್ ಸೇರಿದಂತೆ ವಿವಿಧ ಕಂಪನಿಯ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳ ಮೌಲ್ಯ ₹ 1.60 ಲಕ್ಷವೆಂದು ಅಂದಾಜಿಸಲಾಗಿದೆ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.