ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | 68 ಮೊಬೈಲ್‌ ಸುಲಿಗೆ: ಪದವೀಧರ ಸೇರಿ ಇಬ್ಬರು ಬಂಧನ

Published 27 ಫೆಬ್ರುವರಿ 2024, 16:33 IST
Last Updated 27 ಫೆಬ್ರುವರಿ 2024, 16:33 IST
ಅಕ್ಷರ ಗಾತ್ರ

ಬೆಂಗಳೂರು: ಜನರನ್ನು ಬೆದರಿಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಆರೋಪದಡಿ ಎಂಜಿನಿಯರಿಂಗ್ ಪದವೀಧರ ಸೇರಿ ಇಬ್ಬರನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

‘ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಇತ್ತೀಚೆಗೆ ಸುಲಿಗೆ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ, ಎಂಜಿನಿಯರಿಂಗ್ ಪದವೀಧರ ಸೇರಿ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಇವರಿಂದ 68 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹಿರಿಯೂರಿನಿಂದ ಆಗಾಗ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಮೊಬೈಲ್ ಸುಲಿಗೆ ಮಾಡಿಕೊಂಡು ತಮ್ಮೂರಿಗೆ ಹೋಗುತ್ತಿದ್ದರು. ಅಲ್ಲಿಯೇ ಕಡಿಮೆ ಬೆಲೆಗೆ ಮೊಬೈಲ್ ಮಾರುತ್ತಿದ್ದರು. ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು. ಹಣ ಖಾಲಿಯಾದ ನಂತರ ಪುನಃ ಬೆಂಗಳೂರಿಗೆ ಬರುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT