ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಬಸ್‌ನಲ್ಲಿ ಮೊಬೈಲ್‌ ಕಳ್ಳತನ: ಆರೋಪಿ ಸೆರೆ

Published 6 ಆಗಸ್ಟ್ 2024, 15:45 IST
Last Updated 6 ಆಗಸ್ಟ್ 2024, 15:45 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಾರತ್‌ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಾರತ್‌ಹಳ್ಳಿಯ ಚೇತನ್‌ ಬಂಧಿತ.

ಆರೋಪಿಯಿಂದ ₹2 ಲಕ್ಷ ಮೌಲ್ಯದ ಎಂಟು ಮೊಬೈಲ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

‘ಟಿಕೆಟ್‌ ಪಡೆದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ, ಬಸ್‌ನಲ್ಲಿ ನಿದ್ರಿಸುವ ಪ್ರಯಾಣಿಕರನ್ನೇ ಗುರಿಯಾಗಿಸಿ ಮೊಬೈಲ್‌ ಕಳವು ಮಾಡುತ್ತಿದ್ದ. ಈ ರೀತಿ ಕಳ್ಳತವನ್ನೇ ಹವ್ಯಾಸ ಮಾಡಿಕೊಂಡಿದ್ದ. ಸಿಸಿ ಟಿ.ವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಮಾರತ್‌ಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಆರೋಪಿ ಬಂಧಿಸಲಾಯಿತು. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT