ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೆಡಿಕವರ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ: ಡಿ.ಕೆ. ಶಿವಕುಮಾರ್

Published : 25 ಸೆಪ್ಟೆಂಬರ್ 2024, 15:21 IST
Last Updated : 25 ಸೆಪ್ಟೆಂಬರ್ 2024, 15:21 IST
ಫಾಲೋ ಮಾಡಿ
Comments

ಬೆಂಗಳೂರು: ‘ಮೆಡಿಕವರ್ ಆಸ್ಪತ್ರೆಯು ದಕ್ಷಿಣ ಭಾರತದಲ್ಲಿ ತನ್ನ ಜಾಲ ವಿಸ್ತರಿಸಿದ್ದು, ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ ಹೊಂದಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ನಗರದ ವೈಟ್‌ಫೀಲ್ಡ್‌ನಲ್ಲಿ ಸಮಗ್ರ ಆರೋಗ್ಯ ಸೇವಾ ಸೌಲಭ್ಯ ಹೊಂದಿರುವ ಮೆಡಿಕವರ್‌ ಆಸ್ಪತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮೆಡಿಕವರ್ ಸಂಸ್ಥೆಯು 24 ಆಸ್ಪತ್ರೆಗಳನ್ನು ಹೊಂದಿದ್ದು, 14 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಇದು ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ’ ಎಂದರು.

ಮೆಡಿಕವರ್‌ ಹಾಸ್ಪಿಟಲ್ಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಅನಿಲ್‌ ಕೃಷ್ಣಾ ಮಾತನಾಡಿ, ‘ಮೆಡಿಕವರ್‌ ಆಸ್ಪತ್ರೆಯು ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶ ಹೊಂದಿದೆ. ಹೃದಯ ಸಂಬಂಧಿ ಕಾಯಿಲೆ, ಅಂಗಾಂಗ ಬದಲಾವಣೆ, ಮೂತ್ರಪಿಂಡ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗಳನ್ನು ನೀಡಲಿದೆ’ ಎಂದು ಮಾಹಿತಿ ನೀಡಿದರು.

‘ನೂತನ ಆಸ್ಪತ್ರೆಯು 45 ಒಪಿಡಿ ಕೊಠಡಿಗಳು, 100 ಐಸಿಯು ಬೆಡ್‌ಗಳನ್ನು ಹೊಂದಿದೆ. ದಿನದ 24/7 ತುರ್ತು ಸೇವೆಗಳನ್ನು ಒದಗಿಸುತ್ತದೆ. ನಮ್ಮ ಆಸ್ಪತ್ರೆಯು ಯಾಂತ್ರಿಕ ಬುದ್ಧಿಮತ್ತೆ (ಎಐ) ಆಧಾರಿತ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ’ ಎಂದರು. 

ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ಎನ್.ಎ. ಹ್ಯಾರಿಸ್‌ ಮತ್ತು ಮಂಜುಳಾ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT