ಶುಕ್ರವಾರ, ಅಕ್ಟೋಬರ್ 30, 2020
27 °C

ಮೋದಿ ಜನ್ಮದಿನ: ಸೈಕಲ್‌ ರ‍್ಯಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ‘ಸೇವೆಯೇ ಸಂಘಟನೆ’ ಪರಿಕಲ್ಪನೆಯಡಿ ರಕ್ತದಾನ, ಪೌರ ಕಾರ್ಮಿಕರಿಗೆ ಕಿಟ್‌ ವಿತರಣೆ, ಕೊರೊನಾ ಸೇನಾನಿಗಳಿಗೆ ಸನ್ಮಾನ ಸೇರಿ ಹಲವು ಕಾರ್ಯ
ಕ್ರಮಗಳನ್ನು ಹಮ್ಮಿಕೊಂಡಿದ್ದರು.

ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದ ಮುಂಭಾಗದಲ್ಲಿ ಸಸಿ ನೆಡಲಾಯಿತು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಜಿ ಮಂಜುನಾಥ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಇದ್ದರು.

ಮಲ್ಲೇಶ್ವರದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಭಾಗವಹಿಸಿದರು. ಸಚಿವ ನಾರಾಯಣ ಗೌಡ ಅವರು ಆರ್‌ಎಂವಿ ಬಡಾವಣೆ ವ್ಯಾಪ್ತಿಯ ಪೌರ ಕಾರ್ಮಿಕರಿಗೆ ದಿನ ಬಳಕೆ ವಸ್ತುಗಳಿರುವ ಕಿಟ್‌ ವಿತರಿಸಿದರು.

ಸಚಿವ ವಿ. ಸೋಮಣ್ಣ, ಮೋದಿ ಹೆಸರಿನಲ್ಲಿ ಮಾರುತಿ ಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಮಾರುತಿ ಮಂದಿರದಿಂದ ಸೈಕಲ್ ಜಾಥಾ ಮೂಲಕ ಬಾಲಗಂಗಾಧರನಾಥ ಸ್ವಾಮೀಜಿ ಆಟದ ಮೈದಾನಕ್ಕೆ ಬಂದು, ಅಲ್ಲಿ ತಯಾರಿಸಿದ್ದ 70 ಕಿಲೋ ತೂಕದ ಲಡ್ಡು ಕತ್ತರಿಸಿದರು. 70 ಪೌರಕಾರ್ಮಿಕರು ಮತ್ತು ಏಳು ಯೋಧರನ್ನು ಸನ್ಮಾನಿಸಿದರು. ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಅರುಣ್ ಸೋಮಣ್ಣ ಇದ್ದರು.

ಜಯನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 70 ಜನರಿಗೆ ಕೃತಕ ಕೈ ಮತ್ತು ಕಾಲುಗಳ ಜೋಡಣಾ ಉಪಕರಣ ವಿತರಿಸಲಾಯಿತು.

ರಾಗಿಹಳ್ಳಿ ಯಲ್ಲಿ 70 ಗಿಡಗಳನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ನೆಟ್ಟರು.

ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಘಟಕ‌ ಹಾಗೂ ಮೋದಿ ಬ್ರಿಗೇಡ್ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಸೇರಿ ಕೊರೊನಾ ಸೇನಾನಿಗಳಾಗಿ ಕೆಲಸ ಮಾಡುತ್ತಿರುವವರಿಗೆ ಆಹಾರ ಕಿಟ್ ವಿತರಿಸಲಾಯಿತು.

ಪೌರ ಕಾರ್ಮಿಕರ ಪಾದಪೂಜೆ ನಡೆಯಿತು. ಪ್ರತಿಭಾವಂತ ಮತ್ತು ಅಂಗವಿಕಲ ಮಕ್ಕಳನ್ನು ಅಭಿನಂದಿಸಲಾಯಿತು.

ಬಿಜೆ‍ಪಿ ಎಸ್‌ಟಿ ಮೋರ್ಚಾದ ವತಿಯಿಂದ ರಾಜ್ಯ 70 ಸರ್ಕಾರಿ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

ಕರ್ನಾಟಕ ರಾಜ್ಯ ದಲಿತ ಹಾಗೂ ಹಿಂದುಳಿದ ವರ್ಗಗಳ ವೇದಿಕೆಯು ಪತ್ರ ಚಳವಳಿ ಮೂಲಕ ಪ್ರಧಾನಿಗೆ ಶುಭಾಶಯ ಹೇಳಿದೆ.

ದೇಶದ ಸಮಸ್ಯೆಗಳ ಬಗ್ಗೆ ಗಮನ ಹರಿಸುವಂತೆ ಐದು ಸಾವಿರ ಜನರ ಸಹಿಗಳಿರುವ ಅಂಚೆ ಕಾರ್ಡ್‌ಗಳ ಮೂಲಕ ವೇದಿಕೆ
ಮನವಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು