ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಮ್ಮೆ ಮೋದಿ ಕೈಬಲಪಡಿಸಿ: ಸಿ.ಪಿ.ಯೋಗೇಶ್ವರ್

Published 25 ಮಾರ್ಚ್ 2024, 15:48 IST
Last Updated 25 ಮಾರ್ಚ್ 2024, 15:48 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ದೇಶದ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೈಯನ್ನು ಮತ್ತೊಮ್ಮೆ ಬಲ ಪಡಿಸಬೇಕು ಎಂದು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕರೆ ನೀಡಿದರು.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಡವರ, ಸಾಮಾನ್ಯ ಜನರ ಹಿತಕ್ಕಾಗಿ, ಸರಳ ವ್ಯಕ್ತಿತ್ವದ ಅಭ್ಯರ್ಥಿಗೆ ನಿಮ್ಮೆಲ್ಲರ ಸಹಕಾರಬೇಕಾಗಿದೆ ಎಂದರು.

ರಾಷ್ಟ್ರದ ಪ್ರಗತಿ, ಅಭಿವೃದ್ಧಿಗಾಗಿ, ಮತ್ತೊಮ್ಮೆ ನರೇಂದ್ರ ಮೋದಿ ಅವರ ನಾಯಕತ್ವವನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಲು ಬಿಜೆಪಿಗೆ ಮತನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಕೇಶವ ಪ್ರಸಾದ್ ಹೇಳಿದರು.

ಶಾಸಕ ಮುನಿರತ್ನ, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ನಿರ್ಮಲ್ ಕುಮಾರ್ ಸುರಾನ, ಜೆಡಿಎಸ್ ನಾಯಕ ಎ.ಪಿ.ರಂಗನಾಥ್, ಅಭ್ಯರ್ಥಿ ಮಂಜುನಾಥ್ ಅವರ ಪತ್ನಿ ಅನಸೂಯ ಮಂಜುನಾಥ್, ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT